ಗಂಗಾವತಿ: ನಗರದ ಬಿಜೆಪಿ ಹಿರಿಯ ಮುಖಂಡ ಹಾಗೂ ನಗರಸಭೆಯ ಸ್ಥಾಯಿಸಮಿತಿ ಮಾಜಿ ಅಧ್ಯಕ್ಷ ಕಾಮದೊಡ್ಡ ದೇವಪ್ಪ (44) ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.
ಕಳೆದ ಎರಡು ವಾರದ ಹಿಂದೆ ದೇವಪ್ಪ ಅವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿತ್ತು. ಚಿಕಿತ್ಸೆಗಾಗಿ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆರೋಗ್ಯದಲ್ಲಿ ನಿರಂತರ ಏರುಪೇರಾಗುತಿತ್ತು.
ಆದರೆ ಎರಡು ದಿನಗಳಿಂದ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಮಧ್ಯಾಹ್ನ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿವೆ.