ಕೊಪ್ಪಳ: ತಡರಾತ್ರಿ ನಗರದ ಕಿನ್ನಾಳ ರಸ್ತೆ ಬಳಿಯಿರುವ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನಕ್ಕೆ ನುಗ್ಗಿದ ಖದೀಮರು, ದೇವರ ಮೂರ್ತಿ, ಹುಂಡಿ ಹಣ ಹಾಗೂ ಆಭರಣ ದೋಚಿ ಪರಾರಿಯಾಗಿದ್ದಾರೆ.
ಹೇಮರಡ್ಡಿ ಮಲ್ಲಮ್ಮ ದೇವಸ್ಥಾನ ಬೆಟ್ಟದ ಮೇಲಿದ್ದು, ರಾತ್ರಿ ವೇಳೆ ಇಲ್ಲಿ ಜನರ ಸಂಚಾರವಿರುವುದಿಲ್ಲ. ಹೀಗಾಗಿ ರಾತ್ರಿ ದೇಗುಕ್ಕೆ ನುಗ್ಗಿದ ಖದೀಮರು, ತಮ್ಮ ಕೃತ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಬಾರದೆಂದು ಸಂಪರ್ಕ ಕಟ್ ಮಾಡಿದ್ದಾರೆ. ಬಳಿಕ ಅರ್ಧ ಕೆಜಿ ತೂಕದ ದೇವರ ಮೂರ್ತಿ, ದೇವಿಗೆ ಹಾಕಿದ್ದ 150 ಗ್ರಾಂ ಚಿನ್ನ ಹಾಗೂ ಹುಂಡಿ ಹಣಕ್ಕೆ ಕನ್ನ ಹಾಕಿದ್ದಾರೆ. ಹುಂಡಿಯಲ್ಲಿದ್ದ ಚಿಲ್ಲರೆ ಹಣ ಅಲ್ಲಿಯೇ ಬಿಟ್ಟು ನೋಟುಗಳನ್ನು ತೆಗೆದುಕೊಂಡಿದ್ದಾರೆ.
ಘಟನೆ ಹಿನ್ನೆಲೆಯಲ್ಲಿ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಶ್ವಾನದಳ ಹಾಗೂ ಬೆರಳಚ್ಚು ತಜ್ಞರಿಂದ ಪರಿಶೀಲನೆ ನಡೆಸಿದರು.
ಇದನ್ನೂ ಓದಿ: ಸೈಟ್ ಕೊಡಿಸುವುದಾಗಿ ಹಣ ಪಡೆದು ವಂಚನೆ: ಬೆಂಗಳೂರಿನಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಅರೆಸ್ಟ್