ಗಂಗಾವತಿ : ಬಡ ಮಕ್ಕಳ ಶಿಕ್ಷಣಕ್ಕೆ ಪೂರಕವಾಗಲಿ ಎಂದು ಸರ್ಕಾರ ಶಿಕ್ಷಣ ಇಲಾಖೆಯ ಮೂಲಕ ಉಚಿತ ವಿತರಣೆಗೆ ನೀಡಿದ ಲಕ್ಷಾಂತರ ರೂಪಾಯಿ ಮೌಲ್ಯದ ಪುಸ್ತಕಗಳು ಇಲ್ಲಿನ ಗುಜರಿ ಅಂಗಡಿಯೊಂದರಲ್ಲಿ ಪತ್ತೆಯಾದ ಘಟನೆ ನಗರದಲ್ಲಿ ಬೆಳಕಿಗೆ ಬಂದಿದೆ.
ಬಡಮಕ್ಕಳ ಕೈಯಲ್ಲಿರಬೇಕಾದ ಸಾವಿರಾರು ಪುಸ್ತಕಗಳು ಗುಂಡಮ್ಮಕ್ಯಾಂಪಿನ ಗುಜರಿ ಅಂಗಡಿಯಲ್ಲಿ ಸುಮಾರು 20ಕ್ಕೂ ಹೆಚ್ಚು ಮೂಟೆಗಳಲ್ಲಿ ಪತ್ತೆಯಾಗಿದೆ. ಇವು ಎಲ್ಲಿಂದ ಬಂತು, ಯಾರು ಹಾಕಿದ್ದಾರೆ ಎಂಬ ಮಾಹಿತಿ ಸಿಕ್ಕಿಲ್ಲ.
ಘಟನೆ ಬೆಳಕಿಗೆ ಬರುತ್ತಿದ್ದಂತೆ ಶಿಕ್ಷಣ ಇಲಾಖೆಯ ಸಮನ್ವಯಾಧಿಕಾರಿ ಶಂಕ್ರಪ್ಪ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜೊತೆಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮಾಹಿತಿ ನೀಡಿ ಕ್ರಮಕ್ಕೆ ಮುಂದಾಗಿದ್ದಾರೆ.