ಗಂಗಾವತಿ: ಸರ್ಕಾರದ ಅನ್ನಭಾಗ್ಯ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿ ಕಾಳಸಂತೆಯಲ್ಲಿ ಮಾರಾಟ ಮಾಡಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ನಗರಸಭಾ ಸದಸ್ಯ ಸೇರಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.
ಇದನ್ನೂ ಓದಿ: ಬೈಕ್ಗೆ ಬಿಎಂಟಿಸಿ ಬಸ್ ಡಿಕ್ಕಿ: ಕರ್ತವ್ಯ ಮುಗಿಸಿ ಮನೆಗೆ ತೆರಳುತ್ತಿದ್ದ ಹೆಡ್ ಕಾನ್ಸ್ಟೇಬಲ್ ಬಲಿ
ಉಮೇಶ ಸಿಂಗನಾಳ ಹಾಗೂ ಭಾಷಾ ಮನಿಯಾರ ಬಂಧಿತರು. ನಗರದಲ್ಲಿ ದೊಡ್ಡ ಪ್ರಮಾಣದಲ್ಲಿ ನಡೆಯುತ್ತಿದ್ದ ಅನ್ನಭಾಗ್ಯ ಅಕ್ಕಿಯ ಅಕ್ರಮ ಸಂಗ್ರಹ ಹಾಗೂ ಮಾರಾಟ ನಡೆಯುತ್ತಿರುವ ಕಾರಣ, ಕಳೆದ ತಿಂಗಳು ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಸಹಾಯಕ ಆಯುಕ್ತ, ಆಹಾರ ಇಲಾಖೆಯ ಉಪ ನಿರ್ದೇಶಕ ಸೇರಿದಂತೆ ಹಲವು ಅಧಿಕಾರಿಗಳ ಜಂಟಿ ಕಾರ್ಯಾಚರಣೆ ನಡೆಸಿದ್ದರು.
ಈ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ ಹಲವು ಪ್ರಮುಖರ ಮೇಲೆ ಎಫ್ಐಆರ್ ದಾಖಲಿಸಲಾಗಿತ್ತು. ಬಹುತೇಕರು ತಲೆಮರೆಸಿಕೊಂಡಿದ್ದು, ನಗರಸಭಾ ಸದಸ್ಯ ಉಮೇಶ ಮಾತ್ರ ಸಾರ್ವಜನಿಕ ಸಭೆ ಸಮಾರಂಭಗಳಲ್ಲಿ ಭಾಗಿಯಾಗಿದ್ದರು.
ಆರೋಪಿ ಸಾರ್ವಜನಿಕವಾಗಿ ಕಾಣಿಸಿಕೊಳ್ಳುತಿದ್ದರೂ ಪೊಲೀಸರು ಅವರ ಬಂಧನಕ್ಕೆ ಹಿಂದೇಟು ಹಾಕುತ್ತಿದ್ದಾರೆ ಎಂಬ ದೂರಿನ ಹಿನ್ನೆಲೆಯಲ್ಲಿ ಬಲೆ ಬೀಸಿದ ಪೊಲೀಸರು ಆಸ್ಪತ್ರೆಗೆ ಬರುವಂತೆ ತಿಳಿಸಿ ಅರೆಸ್ಟ್ ಮಾಡಿದ್ದಾರೆ.