ETV Bharat / state

ಕೊರೊನಾ ವ್ಯಾಪಕವಾಗಿ ಹರಡಿರುವುದಕ್ಕೆ ಸರ್ಕಾರವೇ ನೇರ ಹೊಣೆ: ದ್ರುವನಾರಾಯಣ್ ಆರೋಪ - ಕಾಂಗ್ರೆಸ್ ಮುಖಂಡ ನಾಗರಾಜ್ ನಂದಾಪುರ

ಮಸ್ಕಿ ಉಪಚುನಾವಣೆಯಲ್ಲಿ ಸರ್ಕಾರವೇ ಮುಂದೆ ನಿಂತು ಸಾಕಷ್ಟು ಅಕ್ರಮ ಮಾಡಿದೆ. ಆದರೂ ಅಲ್ಲಿನ ಪ್ರಜ್ಞಾವಂತ ಮತದಾರರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುತ್ತಾರೆ. ಮಸ್ಕಿ ಸೇರಿದಂತೆ ಬಸವಕಲ್ಯಾಣ, ಬೆಳಗಾವಿಯ ಉಪ ಚುನಾವಣೆಯಲ್ಲೂ ಕಾಂಗ್ರೆಸ್​​​ಗೆ ಗೆಲುವು ಸಿಗಲಿದೆ ಎಂದಿದ್ದಾರೆ.

Druva Narayan
ಕೆಪಿಸಿಸಿ ಕಾರ್ಯಾಧ್ಯಕ್ಷ ದ್ರುವ ನಾರಾಯಣ್
author img

By

Published : Apr 16, 2021, 5:36 PM IST

ಗಂಗಾವತಿ (ಕೊಪ್ಪಳ): ರಾಜ್ಯದಲ್ಲಿ ಕೋವಿಡ್ ವ್ಯಾಪಕ ಪ್ರಮಾಣದಲ್ಲಿ ಹರಡುತ್ತಿದ್ದು, ಇದನ್ನು ಪರಿಣಾಮಕಾರಿಯಾಗಿ ತಡೆಗಟ್ಟುವಲ್ಲಿ ಸರ್ಕಾರ ನಿರ್ಲಕ್ಷ್ಯ ವಹಿಸಿದ್ದಲ್ಲದೇ ಸಂಪೂರ್ಣ ವಿಫಲವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್ ಆರೋಪಿಸಿದ್ದಾರೆ.

ಕಾಂಗ್ರೆಸ್ ಮುಖಂಡ ನಾಗರಾಜ್ ನಂದಾಪುರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದ ದ್ವಂದ್ವ ನಿಲುವು ಇಂದು ರಾಜ್ಯದಲ್ಲಿ ಕೊರೊನಾ ವ್ಯಾಪಕ ಪ್ರಮಾಣದಲ್ಲಿ ಹರಡಲು ಕಾರಣವಾಗಿದೆ. ಇದಕ್ಕೆ ಸರ್ಕಾರವೇ ನೇರಹೊಣೆ ಎಂದರು.

ಸರ್ಕಾರದ ವಿರುದ್ಧ ಕೆಪಿಸಿಸಿ ಕಾರ್ಯಾಧ್ಯಕ್ಷ ದ್ರುವನಾರಾಯಣ್ ಕಿಡಿ

ಇನ್ನು ಮಸ್ಕಿ ಉಪಚುನಾವಣೆಯಲ್ಲಿ ಸರ್ಕಾರವೇ ಮುಂದೆ ನಿಂತು ಸಾಕಷ್ಟು ಅಕ್ರಮ ಮಾಡಿದೆ. ಆದರೂ ಅಲ್ಲಿನ ಪ್ರಜ್ಞಾವಂತ ಮತದಾರರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುತ್ತಾರೆ. ಮಸ್ಕಿ ಸೇರಿದಂತೆ ಬಸವಕಲ್ಯಾಣ, ಬೆಳಗಾವಿಯ ಉಪಚುನಾವಣೆಯಲ್ಲೂ ಕಾಂಗ್ರೆಸ್​​​ಗೆ ಗೆಲುವು ಸಿಗಲಿದೆ ಎಂದರು.

ಮಸ್ಕಿ ಉಪಚುನಾವಣೆಯಲ್ಲಿ ಉಸ್ತುವಾರಿ ವಹಿಸಿಕೊಂಡು 25 ದಿನ ಕ್ಷೇತ್ರದಲ್ಲಿಯೇ ಇದ್ದು, ಅಲ್ಲಿನ ಪ್ರತಿಯೊಂದು ಚಟುವಟಿಕೆಯ ಬಗ್ಗೆ ಸಂಪೂರ್ಣ ಮಾಹಿತಿ ಇದೆ. ಹೀಗಾಗಿ ಕಾಂಗ್ರೆಸ್ ಪಕ್ಷಕ್ಕೆ ಸುಲಭ ಗೆಲುವು ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.