ಕುಷ್ಟಗಿ (ಕೊಪ್ಪಳ) : ಕುಷ್ಟಗಿ ತಾಲೂಕಿನ ಮೆಣೆದಾಳ ಗ್ರಾಮದ 2ನೇ ವಾರ್ಡ್‌ನಿಂದ ಗ್ರಾಮ ಪಂಚಾಯತ್ ಚುನಾವಣೆಗೆ ಸ್ಪರ್ಧಿಸಿದ್ದ ಅಭ್ಯರ್ಥಿ ವೀರಭದ್ರಪ್ಪ ಬಡಿಗೇರ (60) ಎಂಬುವರು ಶನಿವಾರದಂದು ಮೃತಪಟ್ಟಿದ್ದಾರೆ.
ಚುನಾವಣಾ ಸ್ಪರ್ಧಾ ಕಣದಲ್ಲಿದ್ದ ಅವರು, ಕೆಲ ದಿನಗಳ ಹಿಂದೆ ಮೆದುಳಿನ ಪಾರ್ಶ್ವವಾಯುವಿಗೆ ತುತ್ತಾಗಿ ಹುಬ್ಬಳ್ಳಿಯ ಆಸ್ಪತ್ರೆಯಲ್ಲಿ ಮೂರು ದಿನಗಳ ಕಾಲ ಚಿಕಿತ್ಸೆ ಪಡೆದಿದ್ದರು. ನಂತರ ಅವರನ್ನು ಇಲ್ಲಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸದ್ಯ ಕೊನೆಯುಸಿರೆಳೆದಿದ್ದಾರೆ.
ಈ ಸುದ್ದಿಯನ್ನೂ ಓದಿ: ಕೊಪ್ಪಳದಲ್ಲಿ ನಾಳೆ ಎರಡನೇ ಹಂತದ ಗ್ರಾಪಂ ಚುನಾವಣೆಗೆ ಸಕಲ ಸಿದ್ಧತೆ
ವೀರಭದ್ರಪ್ಪ ಮೆಂಟಗೇರಿ ಸೇರಿದಂತೆ ಸಾಮಾನ್ಯ ಕ್ಷೇತ್ರದಲ್ಲಿ ಒಟ್ಟು ಮೂವರು ಕಣದಲ್ಲಿದ್ದಾರೆ. ಅದೇ ವಾರ್ಡ್‌ನ ಪರಿಶಿಷ್ಟ ಪಂಗಡದ ಮಹಿಳಾ ಸ್ಥಾನಕ್ಕೆ ಇಬ್ಬರು ಸ್ಪರ್ಧಿಸಿದ್ದಾರೆ. ಈ ಕುರಿತು ತಹಶೀಲ್ದಾರ್ ಎಂ. ಸಿದ್ದೇಶ್ ಅವರು ಮಾತನಾಡಿ, ನಿಗದಿಯಂತೆ ಮತದಾನ ನಡೆಯಲಿರುವುದಾಗಿ ತಿಳಿಸಿದ್ದಾರೆ.