ಕೊಪ್ಪಳ : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಗ್ರಾಮ ಪಂಚಾಯತ್ ವಿವಿಧ ಹಂತದ ಸಿಬ್ಬಂದಿ ನಗರದ ಜಿಲ್ಲಾಡಳಿತ ಭವನದ ಮುಂದೆ ಪ್ರತಿಭಟನೆ ನಡೆಸಿದರು.
ಗ್ರಾಮ ಪಂಚಾಯತ್ ನೀರಗಂಟಿಗಳು, ಬಿಲ್ ಕಲೆಕ್ಟರ್ ಹಾಗೂ ವಿವಿಧ ಕೆಲಸ ಮಾಡುವ ಸಿಬ್ಬಂದಿ ಪ್ರತಿಭಟನೆ ನಡೆಸಿ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರವನ್ನು ಒತ್ತಾಯಿಸಿದರು. ಬಿಲ್ ಕಲೆಕ್ಟರ್, ಕಂಪ್ಯೂಟರ್ ಆಪರೇಟರ್, ಗುಮಾಸ್ತರಿಗೆ ಕಾರ್ಮಿಕ ಇಲಾಖೆ ನಿಗದಿಪಡಿಸಿದ ಕನಿಷ್ಠ ವೇತನ ನೀಡಬೇಕು. ಬಾಕಿ ವೇತನ ಪಾವತಿಸಬೇಕು. ಅನುಕಂಪದ ಆಧಾರದ ಮೇಲೆ ನೇಮಕಾತಿ ಮಾಡಲು ನಿರ್ದೇಶನ ನೀಡಬೇಕು ಎಂದು ಆಗ್ರಹಿಸಿದರು.
ಕಸಗೂಡಿಸುವ, ಪಂಪ್ ಆಪರೇಟರ್ ಇತರೆ ಸಿಬ್ಬಂದಿಯನ್ನ ಸರ್ಕಾರದ ಆದೇಶದಂತೆ ಸೇರ್ಪಡೆ ಮಾಡಬೇಕು. ಪಂಪ್ ಆಪರೇಟರ್‌ಗಳನ್ನು ಕರ ವಸೂಲಿಗಾರ ಹುದ್ದೆಗೆ ಬಡ್ತಿ ನೀಡಬೇಕು. ಬಿಲ್ ಕಲೆಕ್ಟರ್ ಹುದ್ದೆಯಿಂದ ಗ್ರೇಡ್-2 ಕಾರ್ಯದರ್ಶಿ ಹುದ್ದೆಗೆ ಬಡ್ತಿ ನೀಡಬೇಕು ಎಂಬುದು ಸೇರಿ ಇನ್ನಿತರ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಪ್ರತಿಭಟನಾಕಾರರು ಈ ಸಂದರ್ಭದಲ್ಲಿ ಸರ್ಕಾರವನ್ನು ಒತ್ತಾಯಿಸಿದರು.