ETV Bharat / state

ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಅತಿಥಿ ಉಪನ್ಯಾಸಕರ ಪ್ರತಿಭಟನೆ - ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ

ರಾಜ್ಯದಲ್ಲಿರುವ 413 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 14,564 ಅತಿಥಿ ಉಪನ್ಯಾಸಕರು ಕೆಲಸ ಮಾಡುತ್ತಿದ್ದಾರೆ. ಕೆಲವರು ಸುಮಾರು ವರ್ಷಗಳಿಂದ ನಿರಂತರವಾಗಿ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಆದರೆ ಅವರ ಕೆಲಸಕ್ಕೆ ಭದ್ರತೆ ಇಲ್ಲವಾಗಿದೆ.

Guest lecturers protest demanding Koppala
ಕೊಪ್ಪಳ: ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯ, ಅತಿಥಿ ಉಪನ್ಯಾಸಕರ ಪ್ರತಿಭಟನೆ
author img

By

Published : Sep 24, 2020, 12:48 PM IST

ಕೊಪ್ಪಳ: ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ಒದಗಿಸುವಂತೆ ಮತ್ತು ಸೇವೆಯಿಂದ ಕೈ ಬಿಡದಿರುವಂತೆ ಆಗ್ರಹಿಸಿ ಅತಿಥಿ ಉಪನ್ಯಾಸಕರು ನಗರದ ಜಿಲ್ಲಾಡಳಿತ ಭವನದ‌ ಮುಂದೆ ಪ್ರತಿಭಟನೆ ನಡೆಸಿದರು‌.

ಕೊಪ್ಪಳ: ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಅತಿಥಿ ಉಪನ್ಯಾಸಕರ ಪ್ರತಿಭಟನೆ

ರಾಜ್ಯದಲ್ಲಿರುವ 413 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 14,564 ಅತಿಥಿ ಉಪನ್ಯಾಸಕರು ಕೆಲಸ ಮಾಡುತ್ತಿದ್ದಾರೆ. ಕೆಲವರು ಸುಮಾರು ವರ್ಷಗಳಿಂದ ನಿರಂತರವಾಗಿ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಆದರೆ ಅವರ ಕೆಲಸಕ್ಕೆ ಭದ್ರತೆ ಇಲ್ಲವಾಗಿದೆ. ಲಾಕ್​​ಡೌನ್ ಸಮಯದಲ್ಲಿ ತಮ್ಮ ಕೈಯಿಂದಲೇ ಖರ್ಚನ್ನು ಭರಿಸಿ ಆನ್‌ಲೈನ್ ತರಗತಿಗಳನ್ನೂ ಸಹ ನಡೆಸಿದ್ದಾರೆ.

ಯುಜಿಸಿಯು ಮಾರ್ಚ್ 24 ರಿಂದ ಜುಲೈ 31ರವರೆಗಿನ ಅವಧಿಯನ್ನು ಸೇವಾ ಅವಧಿ ಎಂದು ಪರಿಗಣಿಸಿ ವೇತನ ನೀಡಬೇಕೆಂದು ನಿರ್ದೇಶನ ನೀಡಿದೆ. ಆದರೆ ಸರ್ಕಾರ ಈ ಬಗ್ಗೆ ಮೌನ ವಹಿಸಿದೆ. ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ಒದಗಿಸುವುದರ ಜೊತೆಗೆ ಇನ್ನಿತರೆ ಬೇಡಿಕೆಗಳನ್ನು ಈಡೇರಿಸುವಂತೆ ಪ್ರತಿಭಟನಾಕಾರರು ಒತ್ತಾಯಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.