ಕುಷ್ಟಗಿ (ಕೊಪ್ಪಳ): ಹೊಟ್ಟೆ ನೋವು ಸಹಿಸದೇ 9ನೇ ತರಗತಿ ವಿದ್ಯಾರ್ಥಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನರಸಾಪೂರ ಗ್ರಾಮದಲ್ಲಿ ನಡೆದಿದೆ.
ಮೇಘರಾಜ್ ಮಲ್ಲಪ್ಪ ಬೇವಿನ ಕಟ್ಟಿ ನರಸಾಪೂರ (14) ಮೃತ ವಿದ್ಯಾರ್ಥಿ. ಯುವಕ ಹಿರೇಗೊಣ್ಣಗರ ಸರ್ಕಾರಿ ಪ್ರೌಢಶಾಲೆಯಲ್ಲಿ 9ನೇ ತರಗತಿ ವ್ಯಾಸಂಗ ಮಾಡುತ್ತಿದ್ದ.
ತೀವ್ರ ಸ್ವರೂಪದ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ವಿದ್ಯಾರ್ಥಿ ತಮ್ಮ ಜಮೀನಿನಲ್ಲಿ ವಿಷ ಸೇವಿಸಿ ಅಸ್ವಸ್ಥಗೊಂಡಿದ್ದನು. ಯುವಕನನ್ನು ಆಸ್ಪತ್ರೆಗೆ ದಾಖಲಿಸಿದರೂ ಸಹ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾನೆ.
ಈ ಬಗ್ಗೆ ಹನುಮಸಾಗರ ಠಾಣೆಯಲ್ಲಿ ಕೇಸು ದಾಖಲಾಗಿದೆ.