ಗಂಗಾವತಿ: ಕಾರಟಗಿ ತಾಲೂಕಿನ ಸಿದ್ದಾಪುರ ಹೊಬಳಿಯ ತುಂಗಭದ್ರಾ ನದಿ ಪಾತ್ರದಲ್ಲಿ ಬರುವ ಬೆನ್ನೂರು, ಶಾಲಿಗನೂರು, ಕಕ್ಕರಗೋಳ, ನಂದಿಹಳ್ಳಿ ಮೊದಲಾದ ಗ್ರಾಮಗಳಲ್ಲಿ ಭಾನುವಾರ ರಾತ್ರಿ ಸುರಿದ ಭಾರಿ ಪ್ರಮಾಣದ ಮಳೆಯಿಂದಾಗಿ ನೂರಾರು ಎಕರೆಯಲ್ಲಿ ಬೆಳೆದಿದ್ದ ಭತ್ತ ನಾಶವಾಗಿದೆ.
ರಾತ್ರಿ ಸುರಿದ ಭಾರಿ ಪ್ರಮಾಣದ ಮಳೆಯಿಂದಾಗಿ ಇದೀಗ ಎಲ್ಲಾ ಬೆಳೆಯು ನೀರು ಪಾಲಾಗಿದ್ದು, ರೈತರನ್ನು ಸಂಕಷ್ಟಕ್ಕೆ ದೂಡುವಂತೆ ಮಾಡಿದೆ. ಕಳೆದ ಐದು ವರ್ಷಗಳಿಂದ ಕೇವಲ ಏಕ ಬೆಳೆಗೆ ಸೀಮಿತವಾಗಿದ್ದ ಈ ಭಾಗದ ರೈತರು ಈ ವರ್ಷ ಎರಡನೇ ಬೆಳೆ ಬೆಳೆದಿದ್ದರು. ಇನ್ನೇನು ಫಸಲು ಕೈಗೆ ಬಂತು ಎನ್ನುವಷ್ಟರಲ್ಲಿ ವರುಣ ಈ ಅವಾಂತರ ಸೃಷ್ಟಿ ಮಾಡಿದ್ದಾನೆ.