ಗಂಗಾವತಿ: ಜಿಲ್ಲಾದ್ಯಂತ ಸೋಮವಾರ ಸಂಜೆಯಿಂದ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಮಂಗಳವಾರ ಶಾಲಾ - ಕಾಲೇಜಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಸುಂದರೇಶ್ ಬಾಬು ಆದೇಶ ಹೊರಡಿಸಿದ್ದಾರೆ.
ಧಾರಾಕಾರವಾಗಿ ಮಳೆ ಸುರಿಯುತ್ತಿರುವ ಕಾರಣಕ್ಕೆ ಜನ - ಜೀವನ ಅಸ್ತವ್ಯಸ್ತವಾಗಿದೆ. ಶಾಲೆ - ಕಾಲೇಜಿಗೆ ಹೋಗುವ ಮಕ್ಕಳಿಗೆ ತೊಂದರೆಯಾಗಲಿದೆ. ಹೀಗಾಗಿ ಮಂಗಳವಾರ ಜಿಲ್ಲಾದ್ಯಂತ ಶಾಲಾ ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಪ್ರಕಟಣೆ ಹೊರಡಿಸಿದ್ದಾರೆ. ಮಂಗಳವಾರದ ವಾತಾವರಣ ಗಮನಿಸಿ ಬುಧವಾರದ ರಜೆಯ ಬಗ್ಗೆ ನಿರ್ಧಾರ ಪ್ರಕಟಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
(ಇದನ್ನೂ ಓದಿ: ಸುಳ್ಯ, ಕಡಬ ತಾಲೂಕಿನಲ್ಲಿ ಮೇಘಸ್ಫೋಟ: ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ)
ಇನ್ನು ಬೆಂಗಳೂರು, ಹಾವೇರಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಸೇರಿದಂತೆ ಹಲವೆಡೆ ಭಾರಿ ಮಳೆಯಾಗುತ್ತಿದ್ದು, ಜನ ಜೀವನ ಅಸ್ತವ್ಯಸ್ತವಾಗಿದೆ. ದಕ್ಷಿಣ ಕನ್ನಡದಲ್ಲಿ ಮಳೆಗೆ ಗುಡ್ಡ ಕುಸಿದು ಇಬ್ಬರು ಮೃತಪಟ್ಟಿದ್ದಾರೆ. ಭಟ್ಕಳದಲ್ಲಿಯೂ ನಾಲ್ವರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.
(ಇದನ್ನೂ ಓದಿ: ಭಟ್ಕಳದಲ್ಲಿ ಭಾರಿ ಮಳೆ : ಮನೆ ಮೇಲೆ ಗುಡ್ಡ ಕುಸಿತ, ನಾಲ್ವರು ಸಾವನ್ನಪ್ಪಿರುವ ಶಂಕೆ)