ಕೊಪ್ಪಳ: ಜಿಲ್ಲೆಯಲ್ಲಿ ನಿನ್ನೆ ರಾತ್ರಿ ಧಾರಾಕಾರ ಮಳೆ ಸುರಿದ ಪರಿಣಾಮ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ.
ಜಿಲ್ಲೆಯಲ್ಲಿ ವ್ಯಾಪಕ ಮಳೆಯಾ ಆಗಿರುವುದರಿಂದ ಹಿರೇಹಳ್ಳ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ಸಾಮರ್ಥ್ಯಕ್ಕಿಂತ ಹೆಚ್ಚಾಗಿರುವ ನೀರನ್ನು ಹಳ್ಳಕ್ಕೆ ಹರಿಬಿಡಲಾಗಿದೆ.
ನಿನ್ನೆ ರಾತ್ರಿ ಜಲಾಶಯದ ಮೂರು ಕ್ರಸ್ಟ್ ಗೇಟ್ ಗಳ ಮೂಲಕ ಹೆಚ್ಚಿನ ನೀರನ್ನು ಹಿರೇಹಳ್ಳಕ್ಕೆ ಹರಿಬಿಡಲಾಗಿತ್ತು. ಇಂದು (ಗುರುವಾರ) ಸದ್ಯಕ್ಕೆ ಒಂದು ಕ್ರಸ್ಟ್ ಗೇಟ್ ಮೂಲಕ ನೀರನ್ನು ಹಳ್ಳಕ್ಕೆ ಬಿಡಲಾಗಿದ್ದು, ಹಿರೇಹಳ್ಳ ತುಂಬಿ ಹರಿಯುತ್ತಿದೆ. ಸಾರ್ವಜನಿಕರ ಸಹಭಾಗಿತ್ವದಲ್ಲಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸ್ವಾಮಿಗಳು ಹಿರೇಹಳ್ಳ ಸ್ವಚ್ಛಗೊಳಿಸಿದ ಬಳಿಕ ಇಷ್ಟೊಂದು ಹಳ್ಳ ತುಂಬಿ ಹರಿಯುತ್ತಿದೆ ಎನ್ನಲಾಗ್ತಿದೆ.