ಕೊಪ್ಪಳ: ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಲಾರಿಯನ್ನು ಹಿಂದೂ ಸಂಘಟನೆ ಕಾರ್ಯಕರ್ತರು ತಡೆ ಹಿಡಿದಿದ್ದಾರೆ.
ಕೊಪ್ಪಳ ನಗರದ ಲೇಬರ್ ಸರ್ಕಲ್ನಲ್ಲಿ ತಡರಾತ್ರಿ ಈ ಘಟನೆ ನಡೆದಿದೆ. ಜಿಲ್ಲೆಯ ಕುಕನೂರು ಪಟ್ಟಣದಿಂದ ಬೆಂಗಳೂರಿಗೆ ಈ ಲಾರಿಯಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಕಸಾಯಿಖಾನೆಗೆ ಸಾಗಿಸಲಾಗುತ್ತಿತ್ತು ಎಂದು ಆರೋಪಿಸಲಾಗಿದೆ. ಲಾರಿಯಯಲ್ಲಿ ಜಾನುವಾರುಗಳನ್ನು ಸಾಗಿಸುತ್ತಿರುವ ಕುರಿತಂತೆ ಖಚಿತ ಮಾಹಿತಿ ಪಡೆದಿದ್ದ ಹಿಂದೂ ಸಂಘಟನೆಯ ಕಾರ್ಯಕರ್ತರು, ನಗರದ ಲೇಬರ್ ಸರ್ಕಲ್ನಲ್ಲಿ ಲಾರಿ ತಡೆದಿದ್ದಾರೆ.
ಲಾರಿ ತಡೆಯುತ್ತಿದ್ದಂತೆ ಚಾಲಕ ಸೇರಿದಂತೆ ಲಾರಿಯಲ್ಲಿದ್ದವರು ಪರಾರಿಯಾಗಿದ್ದಾರೆ. ಸ್ಥಳಕ್ಕಾಗಮಿಸಿದ ನಗರ ಠಾಣೆಯ ಪೊಲೀಸರು ಲಾರಿಯನ್ನು ಠಾಣೆಗೆ ತೆಗೆದುಕೊಂಡು ಹೋಗಿದ್ದಾರೆ.