ಕಟ್ಟಡಗಳ ಅಡಿಗಲ್ಲು ಸಮಾರಂಭದ ವೇಳೆ ಹೆಜ್ಜೇನು ದಾಳಿ, 7 ಜನರಿಗೆ ಗಾಯ - honey bees attack on people in koppal news
ಕಟ್ಟಡಗಳ ಅಡಿಗಲ್ಲು ಸಮಾರಂಭದ ವೇಳೆ ಜನರ ಮೇಲೆ ಹೆಜ್ಜೇನು ದಾಳಿ ಮಾಡಿದ ಘಟನೆ ಯಲಬುರ್ಗಾ ಪಟ್ಟಣದಲ್ಲಿ ಜರುಗಿದೆ.
ಕೊಪ್ಪಳ: ಕಟ್ಟಡಗಳ ಅಡಿಗಲ್ಲು ಸಮಾರಂಭದ ಸಂದರ್ಭದಲ್ಲಿ ಜನರ ಮೇಲೆ ಹೆಜ್ಜೇನು ದಾಳಿ ಮಾಡಿರುವ ಘಟನೆ ಜಿಲ್ಲೆಯ ಯಲಬುರ್ಗಾ ಪಟ್ಟಣದಲ್ಲಿ ಜರುಗಿದೆ.
ಯಲಬುರ್ಗಾ ಪಟ್ಟಣದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಹೆಚ್ಚುವರಿ ಕೊಠಡಿಗಳ, ಪ್ರಯೋಗಾಲಯ, ಗ್ರಂಥಾಲಯ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಕಾರ್ಯಕ್ರಮ ನಡೆಯುತ್ತಿದ್ದ ಸ್ಥಳದ ಒಂದು ಭಾಗದಲ್ಲಿ ಅಡುಗೆ ಮಾಡಲಾಗುತ್ತಿತ್ತು. ಅಡುಗೆ ಮಾಡುವಾಗ ಹೊಗೆ ಹೆಚ್ಚಾದ ಪರಿಣಾಮ ಹತ್ತಿರದಲ್ಲಿದ್ದ ಹೆಜ್ಜೇನುಗಳು ಅಡುಗೆ ಮಾಡುವವರ ಮೇಲೆ ದಾಳಿ ಮಾಡಿವೆ.
ಹೆಜ್ಜೇನು ದಾಳಿಯಿಂದ ಏಳಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲು ಮಾಡಲಾಗಿದೆ. ಆಸ್ಪತ್ರೆಗೆ ಶಾಸಕ ಹಾಲಪ್ಪ ಆಚಾರ್ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.