ಕೊಪ್ಪಳ : ಮನೆ ಗೋಡೆ ಕುಸಿದು ಬಿದ್ದು ವೃದ್ದೆಯೊಬ್ಬರು ಮೃತಪಟ್ಟಿರುವ ಘಟನೆ ಕೊಪ್ಪಳ ತಾಲೂಕಿನ ಮತ್ತೂರಿನಲ್ಲಿ ನಡೆದಿದೆ. ಬಸಮ್ಮ(65) ಮೃತ ವೃದ್ದೆಯಾಗಿದ್ದಾರೆ. ಆಕೆಯ ಗಂಡ ಶಿವನಗೌಡ ಹಾಗೂ ಶಂಕ್ರಮ್ಮ ಎಂಬುವವರಿಗೆ ಗಂಭೀರ ಗಾಯಗಳಾಗಿವೆ.
ಇತ್ತೀಚಿಗೆ ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಯಿಂದಾಗಿ ನೆನೆದಿದ್ದ ಮನೆಯ ಗೋಡೆ ಇಂದು ಮಧ್ಯಾಹ್ನ ವೇಳೆ ಏಕಾಏಕಿ ಕುಸಿದು ಬಿದ್ದಿದೆ. ಮನೆಯಲ್ಲಿದ್ದವರು ಅವಶೇಷಗಳಡಿ ಸಿಲುಕಿಕೊಂಡಿದ್ದು, ತಕ್ಷಣ ರಕ್ಷಣಾ ಕಾರ್ಯಾಚರಣೆ ಕೈಗೊಂಡರೂ ವೃದ್ಧೆ ಬಸಮ್ಮ ಅದಾಗಲೇ ಮೃತಪಟ್ಟಿದ್ದರು ಎಂದು ತಿಳಿದು ಬಂದಿದೆ. ಇನ್ನು ಗಾಯಾಳುಗಳನ್ನು ಕೊಪ್ಪಳ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಅಳವಂಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ : ಅಮ್ಮನವರ ಮೂರ್ತಿ ನಿಮಜ್ಜನ ವೇಳೆ ಅವಘಡ: ನೀರಿನಲ್ಲಿ ಮುಳುಗಿ ಐವರ ಸಾವು