ETV Bharat / state

ಕೊಪ್ಪಳದ ಹುಲಿಹೈದರ ಪ್ರಕರಣ: 40ಕ್ಕೂ ಹೆಚ್ಚು ಮಂದಿ ಬಂಧನ - ಹುಲಿಹೈದರ ಘಟನೆ ಸುದ್ದಿ

ಕೊಪ್ಪಳದ ಕನಕಗಿರಿ ತಾಲೂಕಿನ ಹುಲಿಹೈದರ ಗ್ರಾಮದಲ್ಲಿ ಆಗಸ್ಟ್ 11 ರಂದು ನಡೆದಿದ್ದ ಗಲಾಟೆ ಪ್ರಕರಣದ ತನಿಖೆಯನ್ನು ಪೊಲೀಸರು ಚುರುಕುಗೊಳಿಸಿದ್ದಾರೆ.

Group Clash in Huli Hydera Village
ಹುಲಿಹೈದರ ಪ್ರಕರಣ
author img

By

Published : Aug 19, 2022, 3:54 PM IST

ಗಂಗಾವತಿ: ಕನಕಗಿರಿ ತಾಲೂಕಿನ ಹುಲಿಹೈದರ ಗ್ರಾಮದಲ್ಲಿ ನಡೆದ ಕೋಮು ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಎರಡು ಪ್ರಕರಣಗಳು ದಾಖಲಾಗಿವೆ. ಈ ಎರಡೂ ದೂರಿನಲ್ಲಿ ಉಲ್ಲೇಖಿಸಲಾಗಿದ್ದ 60 ಜನರ ಮೇಲೆ ಕಾನೂನು ಕ್ರಮಕ್ಕೆ ಮುಂದಾಗಿದ್ದೇವೆ ಎಂದು ಜಿಲ್ಲಾ ಎಸ್ಪಿ ಅರಣಂಗ್ಶು ಗಿರಿ ತಿಳಿಸಿದರು.

ಆರೋಪಿಗಳ ಪತ್ತೆ ಯತ್ನ: ಪ್ರಕರಣಕ್ಕೆ ಸಂಬಂಧಿಸಿದಂತೆ 60 ಜನರ ಮೇಲೆ ದೂರು ದಾಖಲಿಸಿ 40ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಲಾಗಿದೆ. 121ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಡಿವೈಎಸ್ಪಿಗೆ ತನಿಖೆಯ ಜವಾಬ್ದಾರಿ ವಹಿಸಲಾಗಿದೆ. ಇದುವರೆಗೆ ಐದು ಶೋಧನಾ ತಂಡಗಳನ್ನು ರಚಿಸಲಾಗಿದ್ದು, ತನಿಖೆ ಪ್ರಗತಿ ಹಂತದಲ್ಲಿದೆ. ರಾಜ್ಯ ಮತು ಹೊರ ರಾಜ್ಯದಲ್ಲಿ ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆಗೆ ಯತ್ನಿಸಲಾಗುತ್ತಿದೆ ಎಂದು ಎಸ್ಪಿ ಮಾಹಿತಿ ಕೊಟ್ಟಿದ್ದಾರೆ.

ಪೊಲೀಸರಿಂದ ಪಥ ಸಂಚಲನ: ಗ್ರಾಮದ ಜನರಲ್ಲಿ ಆತ್ಮಸ್ಥೈರ್ಯ ಮೂಡಿಸುವ ಉದ್ದೇಶಕ್ಕೆ ಪೊಲೀಸ್ ಇಲಾಖೆಯಿಂದ ಪಥ ಸಂಚಲನ ನಡೆದಿದೆ. ಅಮಾಯಕರ ಮೇಲೆ ಯಾವುದೇ ಕಾನೂನು ಕ್ರಮ ಕೈಗೊಂಡಿಲ್ಲ. ಪ್ರಕರಣದಲ್ಲಿ ನಿಷ್ಪಕ್ಷಪಾತ ತನಿಖೆ ನಡೆಯುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಕೋಮು ಗಲಭೆ ಪ್ರಕರಣ.. ಹುಲಿಹೈದರ ಗ್ರಾಮ ತೊರೆದ ಪುರುಷರು, ಮಹಿಳೆಯರ ಪರದಾಟ

ಘಟನೆಯ ಹಿನ್ನೆಲೆ: ಕ್ಷುಲ್ಲಕ ಕಾರಣಕ್ಕಾಗಿ ಆಗಸ್ಟ್ 11 ರಂದು ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ಹುಲಿಹೈದರ ಗ್ರಾಮದಲ್ಲಿ ಗುಂಪು ಘರ್ಷಣೆ ನಡೆದಿತ್ತು. ಭಾಷಾವಲಿ ಹಾಗೂ ಯಂಕಪ್ಪ ಎಂಬ ಇಬ್ಬರು ಮೃತಪಟ್ಟಿದ್ದರು. ಧರ್ಮರಾಜ ಹರಿಜನ ಎಂಬ ಯುವಕ ಗಂಭಿರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.