ಕುಷ್ಟಗಿ (ಕೊಪ್ಪಳ): ಹೊಸಪೇಟೆ ಕೋರ್ಟ್ ಆವರಣದಲ್ಲಿ ವಕೀಲರಾದ ವೆಂಕಟೇಶ ತಾರಳ್ಳಿ ಮೇಲೆ ದುಷ್ಕರ್ಮಿಗಳು ಅಮಾನುಷವಾಗಿ ಹಲ್ಲೆ ನಡೆಸಿದ್ದು, ಇದನ್ನು ಖಂಡಿಸಿ ಕುಷ್ಟಗಿ ವಕೀಲರು ಬಸವೇಶ್ವರ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟಿಸಿ ಆಕ್ರೋಶ ವ್ಯಕ್ತಪಡಿಸಿದರು.
ವಕೀಲರ ಸಂಘದ ಕಾರ್ಯಾಲಯ ಸಂಘದ ಅಧ್ಯಕ್ಷ ಎಚ್. ಬಿ.ಕುರಿ ನೇತೃತ್ವದಲ್ಲಿ ಪ್ರತಿಭಟನೆ ರ‍್ಯಾಲಿ ನಡೆಸಿ ನಂತರ ಬಸವೇಶ್ವರ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿದರು.
![appeal letter](https://etvbharatimages.akamaized.net/etvbharat/prod-images/kn-kst-01-01-vakeelar-pratibhatane-kac10028_01032021124046_0103f_1614582646_262.jpg)
ಹೊಸಪೇಟೆ ನ್ಯಾಯಾಲಯ ಆವರಣದಲ್ಲಿ ವಕೀಲರ ಮೇಲೆ ಹಲ್ಲೆ ನಡೆಯುತ್ತಿರುವುದು ಖಂಡನೀಯ. ವಕೀಲರ ಹಿತರಕ್ಷಣೆಗೆ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು. ವಕೀಲರಿಗೆ ಸರ್ಕಾರ ಸೂಕ್ತ ಭದ್ರತೆ ಕಲ್ಪಿಸುವಂತೆ ವಕೀಲರು ಹಕ್ಕೊತ್ತಾಯ ಮಂಡಿಸಿದರು.
ನಂತರ ತಹಶೀಲ್ದಾರ್ ಕಚೇರಿಗೆ ತೆರಳಿ ತಹಶೀಲ್ದಾರ್ ಎಂ.ಸಿದ್ದೇಶ ಅವರಿಗೆ ಮನವಿ ಸಲ್ಲಿಸಿದರು. ಪ್ರತಿಭಟನೆಯಲ್ಲಿ ಹಿರಿಯ, ಕಿರಿಯ ವಕೀಲರು ಪಾಲ್ಗೊಂಡಿದ್ದರು.