ಕೊಪ್ಪಳ: ಭಾಗ್ಯನಗರ ಪಟ್ಟಣದ ಕೊಪ್ಪಳ ರಸ್ತೆಯಲ್ಲಿರುವ ಸಾಯಿ ಬಾಬಾ ದೇವಸ್ಥಾನದಲ್ಲಿ ಹುಂಡಿ ಕಳುವಾಗಿರೋದು ಬೆಳಕಿಗೆ ಬಂದಿದೆ.
ಖದೀಮರು ಮಧ್ಯರಾತ್ರಿ ಹುಂಡಿ ಹೊತ್ತೊಯ್ಯುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಬುಧವಾರ ಮಧ್ಯರಾತ್ರಿ ಸುಮಾರು 2 ಗಂಟೆ ವೇಳೆಗೆ ಕಳ್ಳರು ಹುಂಡಿ ಹೊತ್ತೊಯ್ದಿದ್ದಾರೆ. ಈ ಹುಂಡಿಯಲ್ಲಿ ಸುಮಾರು 20 ಸಾವಿರ ರೂಪಾಯಿಗಿಂತಲೂ ಅಧಿಕ ಹಣ ಸಂಗ್ರಹವಾಗಿತ್ತು ಎಂದು ಹೇಳಲಾಗಿದೆ. ಹುಂಡಿ ಹೊತ್ತೊಯ್ಯುವುದಕ್ಕೂ ಮುನ್ನ ಮೊದಲು ಈ ಕಳ್ಳರು ದೇವಸ್ಥಾನಕ್ಕೆ ಬಂದು ನೋಡಿಕೊಂಡು ಹೋಗಿದ್ದಾರೆ. ಬಳಿಕ ಬಂದು ಹುಂಡಿಯನ್ನು ಹೊತ್ತೊಯ್ದಿದ್ದಾರೆ ಎನ್ನಲಾಗಿದೆ.
ಈ ಎಲ್ಲಾ ದೃಶ್ಯಗಳು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ದೇವಸ್ಥಾನದ ಅರ್ಚಕನ ಮಗನ ಸ್ನೇಹಿತರು ಹುಂಡಿ ಹೊತ್ತೊಯ್ದಿರುವ ಶಂಕೆ ವ್ಯಕ್ತವಾಗಿದೆ. ಈ ಘಟನೆ ಕೊಪ್ಪಳ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.