ETV Bharat / state

ಸಂಪುಟ ವಿಸ್ತರಣೆ ಕುರಿತಂತೆ ಹೈಕಮಾಂಡ್​​​ ನಿರ್ಧಾರಕ್ಕೆ ನಾನು ಬದ್ಧ: ಶಶಿಕಲಾ ಜೊಲ್ಲೆ - ಸಚಿವ ಸಂಪುಟ ವಿಸ್ತರಣೆ ಕುರಿತು ಶಶಿಕಲಾ ಜೊಲ್ಲೆ ಹೇಳಿಕೆ

ಸಚಿವ ಸಂಪುಟ ವಿಸ್ತರಣೆಯಾದರೆ ತಮ್ಮನ್ನು ಕೈಬಿಡುವ ಕುರಿತಂತೆ ನನಗೆ ಈವರೆಗೂ ಯಾವುದೇ ಸೂಚನೆ ಬಂದಿಲ್ಲ. ಅದರ ಬಗ್ಗೆ ನಾನು ಗಮನ ನೀಡಿಲ್ಲ. ನಮ್ಮ ಪಕ್ಷದ ವರಿಷ್ಠರು ನೀಡಿದ ಜವಾಬ್ದಾರಿಯನ್ನು ಸಮರ್ಥವಾಗಿ ಇಲಾಖೆಯ ಮೂಲಕ ನಿಭಾಯಿಸಿದ್ದೇನೆ. ಪಕ್ಷದ ಹೈಕಮಾಂಡ್ ಸೂಚನೆಗೆ ನಾನು ಬದ್ಧವಾಗಿರುತ್ತೇನೆ ಎಂದು ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದರು.

ಶಶಿಕಲಾ ಜೊಲ್ಲೆ
ಶಶಿಕಲಾ ಜೊಲ್ಲೆ
author img

By

Published : Jan 10, 2021, 7:54 PM IST

ಕೊಪ್ಪಳ: ಸಚಿವ ಸಂಪುಟ ವಿಸ್ತರಣೆಯಾದರೆ ತಮ್ಮನ್ನು ಕೈಬಿಡುವ ಕುರಿತಂತೆ ನನಗೆ ಈವರೆಗೂ ಯಾವುದೇ ಸೂಚನೆ ಬಂದಿಲ್ಲ. ಆದರೆ ಈಗ ನನಗೆ ನೀಡಿರುವ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುತ್ತಿದ್ದೇನೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ.

ಸಂಪುಟ ವಿಸ್ತರಣೆ ಕುರಿತಂತೆ ಹೈಕಮಾಂಡ್​​​ ಸೂಚನೆಗೆ ನಾನು ಬದ್ಧ

ಜಿಲ್ಲೆಯ ಕಾರಟಗಿ ಪಟ್ಟಣದಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಅಥವಾ ರಾಷ್ಟ್ರೀಯ ನಾಯಕರಿಂದ ಯಾವುದೇ ಸೂಚನೆ ಬಂದಿಲ್ಲ. ಆದರೆ ಮಾಧ್ಯಮಗಳಲ್ಲಿ ನನ್ನ ಹೆಸರು ಎರಡು ಬಾರಿ ಕೇಳಿ ಬಂದಿದೆ. ಈಗ ಮೂರನೇ ಬಾರಿಯೂ ಸಹ ನನ್ನ ಹೆಸರು ಕೇಳಿ ಬರುತ್ತಿದೆ. ಆದರೆ ನಾನು ಅದರ ಬಗ್ಗೆ ಗಮನ ನೀಡಿಲ್ಲ. ನಮ್ಮ ಪಕ್ಷದ ವರಿಷ್ಠರು ನೀಡಿದ ಜವಾಬ್ದಾರಿಯನ್ನು ಸಮರ್ಥವಾಗಿ ಇಲಾಖೆಯ ಮೂಲಕ ನಿಭಾಯಿಸಿದ್ದೇನೆ. ಪಕ್ಷದ ಹೈಕಮಾಂಡ್ ಸೂಚನೆಗೆ ನಾನು ಬದ್ಧವಾಗಿರುತ್ತೇನೆ.

ಓದಿ-ಯೂಥ್ ಕಾಂಗ್ರೆಸ್ ಚುನಾವಣೆಯಲ್ಲಿ ನಾನು ಹಸ್ತಕ್ಷೇಪ ಮಾಡುವುದಿಲ್ಲ: ಡಿ.ಕೆ.ಶಿವಕುಮಾರ್

ನಾನು ಪಕ್ಷದ ಸಂಘಟನೆಯಿಂದ ಬಂದಿದ್ದೇನೆ. ಹೀಗಾಗಿ ಪಕ್ಷದ ಹೈಕಮಾಡ್ ಆದೇಶದಂತೆ ನಾನು ನಡೆದುಕೊಳ್ಳುತ್ತೇನೆ. ವಿರೋಧ ಪಕ್ಷದವರು ವಿರೋಧವಾಗಿಯೇ ಹೇಳುತ್ತಾರೆ. ಅವರಲ್ಲಿಯೂ ಅಸಮಾಧಾನವಿರುತ್ತದೆ. ಯಡಿಯೂರಪ್ಪ ಅವರು ಕಳೆದ ಅವಧಿಯಲ್ಲಿ ಸಿಎಂ ಆಗಿದ್ದಾಗ ಮಾಡಿದ ಕೆಲಸಗಳನ್ನು ಮೆಚ್ಚಿ ಅನೇಕರು ಬಿಜೆಪಿ ಪಕ್ಷ ಸೇರಿ ಬಿಜೆಪಿ ಸರ್ಕಾರ ಬರುವಂತೆ ಮಾಡಿದ್ದಾರೆ. ಅವರಿಗೆ ನಾನು ಅಭಿನಂದನೆ ಸಲಿಸುತ್ತೇನೆ. ವಿರೋಧ ಪಕ್ಷದವರು ವಿರೋಧ ಮಾಡುವುದು ಅವರ ಕಾರ್ಯ. ನಮ್ಮ ಕೆಲಸವನ್ನು ನಾವು ಮಾಡುತ್ತೇವೆ ಎಂದರು.

ಅಪೌಷ್ಟಿಕ ಮಕ್ಕಳ ಬಗ್ಗೆ ಸಾಕಷ್ಟು ಗಮನ ಹರಿಸಲಾಗಿದೆ. ಯಾದಗಿರಿ, ಕೊಪ್ಪಳ, ರಾಯಚೂರು ಜಿಲ್ಲೆಗಳಲ್ಲಿ ಅಪೌಷ್ಟಿಕ ಮಕ್ಕಳ ಸಂಖ್ಯೆ ಹೆಚ್ಚಿದೆ. ಅಪೌಷ್ಟಿಕತೆ ನಿವಾರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.