ಕೊಪ್ಪಳ: ವಿದ್ಯಾರ್ಥಿ ಯಲ್ಲಾಲಿಂಗನ ಕೊಲೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು ಒತ್ತಾಯಿಸುವುದಾಗಿ ಜಿಲ್ಲೆಯ ಕನಕಗಿರಿ ಕ್ಷೇತ್ರದ ಶಾಸಕ ಬಸವರಾಜ ದಡೇಸೂಗೂರು ಹೇಳಿದ್ದಾರೆ.
ಈ ಬಗ್ಗೆ ಮಾತನಾಡಿ, ಕೊಲೆಯಾದ ವಿದ್ಯಾರ್ಥಿ ಯಲ್ಲಾಲಿಂಗನ ತಾಯಿ ಕೆಂಚಮ್ಮ ತಮ್ಮ ಮಗನ ಸಾವಿಗೆ ನ್ಯಾಯ ಸಿಕ್ಕಿಲ್ಲ ಎಂದು ನಮ್ಮ ಬಳಿ ಹೇಳಿದ್ದಾಳೆ. ಮಗನ ಸಾವಿಗೆ ನ್ಯಾಯ ಕೊಡಿಸುವಂತೆ ಬೇಡಿಕೊಂಡಿದ್ದಾಳೆ. ಆತನ ಸಾವಿಗೆ ನ್ಯಾಯ ಸಿಗಬೇಕಿದೆ. ಈ ಹಿನ್ನೆಲೆಯಲ್ಲಿ ಈ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ನಾನು ಆಗ್ರಹಿಸುತ್ತೇನೆ ಎಂದು ಹೇಳಿದರು.
ಕಾನೂನು ಎಲ್ಲರಿಗೂ ಒಂದೆ. ತಪ್ಪು ಮಾಡಿದವರಿಗೆ ಕಾನೂನು ಉತ್ತರಿಸುತ್ತದೆ. ಈ ಬಗ್ಗೆ ಸಂಬಂಧಿಸಿದ ಸಚಿವರೊಂದಿಗೆ ಮಾತನಾಡಿದ್ದೇನೆ. ಈ ಹಿಂದಿನ ಸರ್ಕಾರದಲ್ಲಿ ನಮ್ಮ ಕ್ಷೇತ್ರದ ಜನರಿಗೆ ಆದ ಅನ್ಯಾಯಕ್ಕೆ ನ್ಯಾಯ ಕೊಡಿಸುವ ಪ್ರಯತ್ನ ಮಾಡುತ್ತೇನೆ ಎಂದು ಹೇಳಿದರು.