ETV Bharat / state

ಗಂಗಾವತಿ: ರೈತರೊಂದಿಗೆ ಗದ್ದೆಗಿಳಿದು ಭತ್ತದ ಸಸಿ ನಾಟಿ ಮಾಡಿದ IAS ಅಧಿಕಾರಿ - ಈಟಿವಿ ಭಾರತ್ ಕನ್ನಡ ಸುದ್ದಿ

ಕೊಪ್ಪಳ ಜಿಲ್ಲಾ ಪಂಚಾಯಿತಿ ಸಿಇಒ ರೈತರೊಂದಿಗೆ ಭತ್ತದ ಸಸಿಗಳನ್ನು ನಾಟಿ ಮಾಡಿ ಗಮನ ಸೆಳೆದರು.

ರೈತರೊಂದಿಗೆ ಭತ್ತದ ಸಸಿ ನಾಟಿ ಮಾಡಿದ ಐಎಎಸ್ ಅಧಿಕಾರಿ

author img

By

Published : Aug 15, 2023, 7:40 PM IST

Updated : Aug 15, 2023, 10:35 PM IST

ಗಂಗಾವತಿ (ಕೊಪ್ಪಳ) : 'ರೈತರೊಂದಿಗೆ ಒಂದು ದಿನ' ಎಂಬ ಕಾರ್ಯಕ್ರಮ ಹಮ್ಮಿಕೊಂಡಿರುವ ಕೊಪ್ಪಳ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ (ಸಿಇಒ) ರಾಹುಲ್​ ರತ್ನಂ ಪಾಂಡೆ ಅವರಿಂದು ಸ್ವಾತಂತ್ರ್ಯ ದಿನೋತ್ಸವದ ಅಂಗವಾಗಿ ತಾಲೂಕಿನ ಮರಳಿ ಹೋಬಳಿಯ ಕೋಟಯ್ಯ ಕ್ಯಾಂಪಿನಲ್ಲಿ ರೈತರೊಂದಿಗೆ ಭತ್ತದ ಗದ್ದೆಗಿಳಿದು, ಸಸಿಗಳನ್ನು ನಾಟಿ ಮಾಡಿದರು. ಈ ಸಂದರ್ಭದಲ್ಲಿ ಅವರು ಬಿಳಿ ಪಂಚೆ, ಟಿ ಶರ್ಟ್‌ ಧರಿಸಿದ್ದರು. ಬಳಿಕ ಹೊಲದಲ್ಲೇ ಕುಳಿತು ಮಧ್ಯಾಹ್ನದ ಭೋಜನ ಸವಿದರು.

ಜನರೊಂದಿಗೆ ಮಧ್ಯಾಹ್ನದ ಭೋಜನ ಸವೆದ ಸಿಇಓ
ಜನರೊಂದಿಗೆ ಮಧ್ಯಾಹ್ನದ ಭೋಜನ ಸವಿದ ಸಿಇಒ

ರೈತರೊಂದಿಗೆ ಸಮಸ್ಯೆಗಳ ಬಗ್ಗೆ ಚರ್ಚಿಸಿದ ಅಧಿಕಾರಿ, ಹೊಲದಲ್ಲಿ ಟ್ರ್ಯಾಕ್ಟರ್ ಚಲಾಯಿಸಿದರು. ಇದಕ್ಕೂ ಮೊದಲು ಹೊಸಕೇರಿ ಗ್ರಾಮದ ಬೀಜ ಸಂಸ್ಕರಣಾ ಕೇಂದ್ರ, ಕೋಟಯ್ಯ ಕ್ಯಾಂಪಿನ ಅನ್ನಪೂರ್ಣ ಮಹಿಳಾ ಸಂಘದ ಕಿರು ಆಹಾರ ಉತ್ಪಾದನಾ ಘಟಕ ಹಾಗೂ ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಂಡಿರುವ ರೈತ ಶೇಷಗಿರಿ ಅವರ ಹೊಲಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ರೈತರೊಂದಿಗೆ ಭತ್ತ ನಾಟಿ ಮಾಡಿದ ಐಎಎಸ್ ಅಧಿಕಾರಿ

ಗದ್ದೆಗಿಳಿದು ಸಸಿ ನಾಟಿ ಮಾಡಿದ್ದ ವಿದ್ಯಾರ್ಥಿಗಳು : ಉತ್ತರ ಕನ್ನಡದ ಅಂಕೋಲಾ ತಾಲೂಕಿನ ಶಾಲೆಯೊಂದರಲ್ಲಿ ಮಕ್ಕಳನ್ನು ಗದ್ದೆಗಿಳಿಸಿ ಕೃಷಿ ಚಟುವಟಿಕೆಯಲ್ಲಿ ತೊಡಗಿಸುವ ಮೂಲಕ ವಿಭಿನ್ನವಾಗಿ ಪಾಠ (ಜುಲೈ 21-2023) ಮಾಡಲಾಗಿತ್ತು. ತೆಂಕಣಕೇರಿ ಗ್ರಾಮದ ಆದರ್ಶ ಪ್ರೌಢಶಾಲೆಯ ಮಕ್ಕಳಿಗೆ ಗದ್ದೆ ಎಂದರೇನು?, ಬೇಸಾಯ ಹೇಗಿರುತ್ತದೆ?, ನಾಟಿ ಹೇಗೆ ಮಾಡಬೇಕು ಎಂಬ ಮಾಹಿತಿ ನೀಡುತ್ತಾ ಮಕ್ಕಳನ್ನು ಕೃಷಿ ಚಟುವಟಿಕೆಯಲ್ಲಿ ತೊಡಗಿಸಲಾಗಿತ್ತು. ಮಕ್ಕಳು ಮಳೆ ಲೆಕ್ಕಿಸದೇ ಉತ್ಸಾಹದಲ್ಲಿ ಪಾಲ್ಗೊಂಡಿದ್ದರು.

ಹರ್ಷ ವ್ಯಕ್ತಪಡಿಸಿದ್ದ ಗ್ರಾಮಸ್ಥರು: ತರಗತಿಯಲ್ಲಿ ಪಾಠ ಮಾಡುವುದಕ್ಕಿಂತ, ಪ್ರಾಯೋಗಿಕವಾಗಿ ತೋರ್ಪಡಿಸುವುದರಿಂದ, ವಿದ್ಯಾರ್ಥಿಗಳಿಗೆ ಸಂಪೂರ್ಣ ಮಾಹಿತಿಯನ್ನು ಮನದಟ್ಟು ಮಾಡಲು ಸಾಧ್ಯ ಎಂಬ ಆಶಯದೊಂದಿಗೆ ಸ್ಥಳೀಯರ ಸಹಕಾರದಲ್ಲಿ ಗದ್ದೆಯಲ್ಲಿ ಭತ್ತದ ನಾಟಿ ಮಾಡುವ ಮೂಲಕ ಕೃಷಿ ಶಿಕ್ಷಣ ನೀಡಲಾಗಿತ್ತು. ಪಠ್ಯದಲ್ಲಿರುವ ಕೃಷಿ ಚಟುವಟಿಕೆ ಪಾಠ ಮಾಡಬೇಕಿದ್ದ ಶಿಕ್ಷಕರು ವಿದ್ಯಾರ್ಥಿಗಳನ್ನು ನೇರವಾಗಿ ಭತ್ತದ ಗದ್ದೆಗೆ ಕರೆದುಕೊಂಡು ಭತ್ತದ ನಾಟಿ ಮಾಡುವ ಪ್ರಾತ್ಯಕ್ಷಿಕೆ ತೋರಿಸಿದ್ದರು. ರೈತರ ಪರಿಶ್ರಮವನ್ನು ಅರಿತ ವಿದ್ಯಾರ್ಥಿಗಳು ಗದ್ದೆಯಲ್ಲಿ ಭತ್ತ ನಾಟಿ ಮಾಡುವ ಪಾಠವನ್ನು ಮಾಡುತ್ತಿರುವ ಸಂದರ್ಭದಲ್ಲಿ ಹಲವು ಪ್ರಶ್ನೆಗಳನ್ನು ಕೇಳಿ, ತಮ್ಮಲ್ಲಿರುವ ಅನುಮಾನಗಳನ್ನು ಬಗೆಹರಿಸಿಕೊಂಡಿದ್ದರು. ಹಾಗೆಯೇ ಮಕ್ಕಳ ನಾಟಿ ಮಾಡುವ ಉತ್ಸಾಹ ಕಂಡ ಪಾಲಕರು ಹಾಗೂ ಗ್ರಾಮಸ್ಥರು ಸಂತೋಷ ವ್ಯಕ್ತಪಡಿಸಿದ್ದರು.

ರೈತರ ಕಷ್ಟ ಅರಿವಿಗೆ ಬಂದಿದೆ: ಗದ್ದೆ ನಾಟಿ ಬಳಿಕ ಪ್ರತಿಕ್ರಿಯಿಸಿದ ವಿದ್ಯಾರ್ಥಿನಿ ಸಿಂಚನಾ‌ ನಾಯ್ಕ, "ಗದ್ದೆಯಲ್ಲಿ ಇಳಿದು ಸಸಿ ನಾಟಿ ಮಾಡಿರುವುದು ನಮಗೆ ವಿಶೇಷ ಅನುಭವ ನೀಡಿತು. ಕೃಷಿಯಲ್ಲಿ ಕೆಲಸ ಮಾಡುವ ರೈತರ ಪರಿಶ್ರಮವನ್ನು ಶಿಕ್ಷಕರು ನಮಗೆ ಹೇಳಿ ಕೊಟ್ಟಿದ್ದಾರೆ. ಗದ್ದೆಯಲ್ಲಿ ನಾವೆಲ್ಲರೂ ಖುಷಿಯಿಂದ ಭತ್ತದ ಸಸಿಗಳನ್ನು ನೆಟ್ಟಿದ್ದೇವೆ. ಆಗ ನಮಗೆ ರೈತರು ಎಷ್ಟೊಂದು ಕಷ್ಟಪಡುತ್ತಾರೆ ಎಂಬುದು ಅರಿವಿಗೆ ಬಂದಿದೆ. ಆದರೆ ಈ ರೀತಿ ಗದ್ದೆ ನಾಟಿ ಮಾಡಿರುವುದು ಖುಷಿಯಾಗಿದೆ" ಎಂದು ಹೇಳಿದ್ದರು.

ಇದನ್ನೂ ಓದಿ: ಮಕ್ಕಳಿಗೆ ಕೃಷಿ ಪಾಠ: ಗದ್ದೆಗಿಳಿದು ಭತ್ತದ ಸಸಿ ನಾಟಿ ಮಾಡಿದ ವಿದ್ಯಾರ್ಥಿಗಳು

Last Updated : Aug 15, 2023, 10:35 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.