ETV Bharat / state

ಲಾಕ್​​ಡೌನ್ ಸಡಿಲಿಕೆ ಬಳಿಕ ಕೊಪ್ಪಳ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೊರೊನಾ - Gangavathi Increasing corona News

ಹೊರ ಜಿಲ್ಲೆ, ರಾಜ್ಯಗಳಿಂದ ಜನ ಸಂಚಾರಕ್ಕೆ ಸರ್ಕಾರ ನಿರ್ಧಾರ ಕೈಗೊಂಡ ಬಳಿಕ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಕೊರೊನಾ ವ್ಯಾಪಕವಾಗಿ ಹರಡಲು ಆರಂಭವಾಗಿದೆ.

ಲಾಕ್​​ಡೌನ್ ಸಡಿಲಿಕೆ ಬಳಿಕ ಕೊಪ್ಪಳ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೊರೊನಾ

author img

By

Published : Aug 16, 2020, 8:33 AM IST

ಗಂಗಾವತಿ: ಕೊರೊನಾ ಲಾಕ್​ಡೌನ್​ ಸಂದರ್ಭದಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ಕೊರೊನಾ ಸಂಪೂರ್ಣ ನಿಯಂತ್ರಣದಲ್ಲಿತ್ತು. ಆದರೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಲಾಕ್​ಡೌನ್​ ಸಡಲಿಕೆ ಮಾಡಿದ ಬಳಿಕವೇ ಜಿಲ್ಲೆಯಲ್ಲಿ ಕೊರೊನಾ ವ್ಯಾಪಕವಾಗಿ ಹರಡುತ್ತಿದೆ ಎಂದು ಸಹಾಯಕ ಆಯುಕ್ತ ನಾರಾಯಣ ಕನಕರೆಡ್ಡಿ ಹೇಳಿದರು.

ಲಾಕ್​​ಡೌನ್ ಸಡಿಲಿಕೆ ಬಳಿಕ ಕೊಪ್ಪಳ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೊರೊನಾ

ಹೊರ ಜಿಲ್ಲೆ, ರಾಜ್ಯಗಳಿಂದ ಜನ ಸಂಚಾರಕ್ಕೆ ಸರ್ಕಾರ ನಿರ್ಧಾರ ಕೈಗೊಂಡ ಬಳಿಕ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಕೊರೊನಾ ವ್ಯಾಪಕವಾಗಿ ಹರಡಲು ಆರಂಭವಾಗಿದೆ. ಇಂದು ಜಿಲ್ಲೆಯಲ್ಲಿನ ರೋಗಿಗಳ ಪೈಕಿ ಶೇ.80ರಷ್ಟು ಗಂಗಾವತಿಯಿಂದ ವರದಿಯಾಗುತ್ತಿವೆ ಎಂದು ಕಳವಳ ವ್ಯಕ್ತಪಡಿಸಿದರು. ಜಿಲ್ಲೆಯಲ್ಲಿ ಇದುವರೆಗೂ 3,798 ಪ್ರಕರಣಗಳಿದ್ದು, 2,047 ಜನ ಗುಣಮುಖರಾಗಿ ಮನೆಗೆ ಸೇರಿದ್ದಾರೆ. ಜಿಲ್ಲೆಯ 3,798 ಒಟ್ಟು ಪ್ರಕರಣಗಳಲ್ಲಿ ಗಂಗಾತಿಯಲ್ಲಿ 1,620 ಕೇಸ್​ಗಳು ಪತ್ತೆಯಾಗಿವೆ. ಗಂಗಾವತಿ ತಾಲೂಕಿನ 20ಕ್ಕೂ ಹೆಚ್ಚು ಜನ ಮೃತಪಟ್ಟಿದ್ದಾರೆ ಎಂದು ಮಾಹಿತಿ ನೀಡಿದರು.

ಇಂತಹ ಸಂಧಿಗ್ಧ ಸ್ಥಿತಿಯಲ್ಲಿ ನಾವಿದ್ದೇವೆ. ಕೊರೊನಾ ಹೋಗಲಾಡಿಸಲು ಆರೋಗ್ಯ ಇಲಾಖೆ ಹಗಲಿರುಳು ನಿರಂತರವಾಗಿ ಶ್ರಮಿಸುತ್ತಿದೆ. ಸಿಬ್ಬಂದಿ ತಮ್ಮ ಪ್ರಾಣ ಒತ್ತೆಯಿಟ್ಟು, ಕುಟುಂಬವನ್ನು ಲೆಕ್ಕಿಸದೇ ರೋಗಿಗಳ ಆರೈಕೆಯಲ್ಲಿ ಶ್ರಮಿಸುತ್ತಿದ್ದಾರೆ. ಜನರ ಸಹಕಾರವೂ ಅಗತ್ಯ ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.