ಗಂಗಾವತಿ: ರಾಜ್ಯದ ಅನ್ಯ ಜಿಲ್ಲೆ, ತಾಲೂಕುಗಳಲ್ಲಿ ಸಿಲುಕಿ ಇದೀಗ ಮತ್ತೆ ತವರಿನತ್ತ ಮರಳುತ್ತಿರುವ ವಲಸೆ ಕಾರ್ಮಿಕರ ಸಂಖ್ಯೆ ನಗರದಲ್ಲಿ ಹೆಚ್ಚಾಗುತ್ತಿರುವ ಹಿನ್ನೆಲೆ ಜಿಲ್ಲಾಡಳಿತ ಎಲ್ಲರಿಗೂ ಕಡ್ಡಾಯ ಗಂಟಲು ದ್ರವ ಪರೀಕ್ಷೆ ನಡೆಸಲು ಸೂಚನೆ ನೀಡಿದೆ.
ಮೇ 5ರಂದು ಕೊರೊನಾ ಶಂಕಿತ ವ್ಯಕ್ತಿ ಬೆಂಗಳೂರಿನಿಂದ ಗಂಗಾವತಿಗೆ ಬಂದು ಹೋದ ಬಳಿಕ ಜಿಲ್ಲೆಯಲ್ಲಿ ತೀವ್ರ ಆತಂಕ ಸೃಷ್ಟಿಯಾಗಿತ್ತು. ಆಕಸ್ಮಿಕವಾಗಿ ನಡೆಯುತ್ತಿರುವ ಇಂತಹ ಘಟನೆಗಳಿಂದ ಮುಂಜಾಗ್ರತೆ ವಹಿಸುವ ಉದ್ದೇಶಕ್ಕೆ ಯಾವುದೇ ಜಿಲ್ಲೆ, ತಾಲೂಕಿನಿಂದ ಬಂದರೂ ಪರೀಕ್ಷೆ ಕಡ್ಡಾಯಗೊಳಿಸಲಾಗಿದೆ.
ಲಾಕ್ಡೌನ್ ಕೊಂಚ ಸಡಲಿಕೆಯಾದ ಬಳಿಕ ಅದರಲ್ಲೂ ವಿಶೇಷವಾಗಿ ಸೇವಾ ಸಿಂಧು ಆ್ಯಪ್ ಮೂಲಕ ಇ-ಪಾಸ್ ತೆಗೆದುಕೊಳ್ಳುತ್ತಿರುವವರ ಸಂಖ್ಯೆ ಹೆಚ್ಚಾದಂತೆಲ್ಲಾ ನಗರಕ್ಕೆ ಅನಿರೀಕ್ಷಿತವಾಗಿ ಹೆಚ್ಚಿನ ಪ್ರಮಾಣದ ಜನ ಆಗಮಿಸುತ್ತಿದ್ದಾರೆ.