ETV Bharat / state

ಸರ್ಕಾರಿ ಆಸ್ಪತ್ರೆಯ ಇತಿಹಾಸದಲ್ಲೇ ಮೊದಲ ಬಾರಿಗೆ ಬಂಜೆತನಕ್ಕೆ ಚಿಕಿತ್ಸೆ - ಗಂಗಾವತಿ ಸರ್ಕಾರಿ ಆಸ್ಪತ್ರೆ ಬಂಜೆತನ ನಿವಾರಣೆ ಚಿಕಿತ್ಸೆ

ಮೊದಲ ಬಾರಿಗೆ ಸರ್ಕಾರಿ ಆಸ್ಪತ್ರೆಗಳ ಇತಿಹಾಸದಲ್ಲೇ ಸರ್ಕಾರಿ ಉಪ ವಿಭಾಗ ಆಸ್ಪತ್ರೆಯಲ್ಲಿ ಬಂಜೆತನ (ಇನ್ಫಟರ್ಲಿಟಿ) ಸಮಸ್ಯೆಗೆ ಪರಿಹಾರ ದೊರಕಿಸಿ ಕೊಡುವ ನಿಟ್ಟಿನಲ್ಲಿ ಬೆಂಗಳೂರಿನ ಮಿಲನ ಸಂಸ್ಥೆಯ ತಜ್ಞವೈದ್ಯರು ಗಂಗಾವತಿಯಲ್ಲಿ ಶಿಬಿರ ಆಯೋಜಿಸಿದ್ದರು.

infertility-treatment-first-time-in-government-hospital
ಗಂಗಾವತಿ ಆಸ್ಪತ್ರೆ
author img

By

Published : Jan 30, 2020, 3:40 PM IST

ಗಂಗಾವತಿ: ರಾಜ್ಯದಲ್ಲಿ ಮೊದಲ ಬಾರಿಗೆ ತಾಲೂಕು ಸರ್ಕಾರಿ ಉಪ ವಿಭಾಗ ಆಸ್ಪತ್ರೆಯಲ್ಲಿ ಬಂಜೆತನ (ಇನ್ಫಟರ್ಲಿಟಿ) ಸಮಸ್ಯೆಗೆ ಪರಿಹಾರ ದೊರಕಿಸಿ ಕೊಡುವ ನಿಟ್ಟಿನಲ್ಲಿ ಶಿಬಿರ ಆಯೋಜಿಸಲಾಗಿತ್ತು.

ದಂಪತಿಗಳ ಬಂಜೆತನ ನಿವಾರಣೆಯ ಕ್ಷೇತ್ರದಲ್ಲಿ ಎರಡು ದಶಕದಿಂದ ಶ್ರಮಿಸುತ್ತಿರುವ ಭಾರತದ ಮುಂಚೂಣಿ ಸಂಸ್ಥೆ ಬೆಂಗಳೂರಿನ ಮಿಲನ ಸಂಸ್ಥೆಯ ತಜ್ಞ ವೈದ್ಯರ ತಂಡ, ಗಂಗಾವತಿಯ ಉಪ ವಿಭಾಗ ಆಸ್ಪತ್ರೆಗೆ ಭೇಟಿ ನೀಡಿ 160 ಪ್ರಕರಣಗಳನ್ನು ಪರಿಶೀಲಿಸಿದರು.

ಸರ್ಕಾರಿ ಆಸ್ಪತ್ರೆಯ ಇತಿಹಾಸದಲ್ಲಿ ಮೊದಲ ಬಾರಿಗೆ ಬಂಜೆತನಕ್ಕೆ ಚಿಕಿತ್ಸೆ

ಬಂಜೆತನ ಚಿಕಿತ್ಸೆ ಎಂಬುದು ಕೇವಲ ಖಾಸಗಿ ಆಸ್ಪತ್ರೆಗಳಿಗೆ ಮಾತ್ರ ಸೀಮಿತವಾಗಿತ್ತು. ಲಕ್ಷಾಂತರ ರೂಪಾಯಿ ವೆಚ್ಚದ ಈ ಚಿಕಿತ್ಸೆ ಬಡ ಜನರಿಗೂ ಅನುಕೂಲವಾಗಲಿ ಎಂಬ ನಿಟ್ಟಿನಲ್ಲಿ ತಜ್ಞವೈದ್ಯರಿಂದ ತಪಾಸಣೆ ನಡೆಸಿ ಸರ್ಕಾರಿ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಕೊಡಲಾಗುವುದು ಎಂದು ಆಸ್ಪತ್ರೆಯ ಆಡಳಿತಾಧಿಕಾರಿ ಡಾ. ಈಶ್ವರ್​ ಸವುಡಿ ತಿಳಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.