ಗಂಗಾವತಿ: ಶಿಕ್ಷಣ ಸಚಿವ ಸುರೇಶ ಕುಮಾರ್ ಅವರು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿ, ಕರ್ತವ್ಯಲೋಪ ಎಸಗಿದ್ದಾರೆ ಎಂದು ಆರೋಪಿಸಿ ವಿವಿಧ ದಲಿತ ಸಂಘಟನೆಗಳ ಮುಖಂಡರು ಪ್ರತಿಭಟನೆ ನಡೆಸಿದರು.
ನಗರದ ಕೋರ್ಟ್ ಎದುರಿಗಿರುವ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ದಲಿತ ಹಾಗೂ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆಯಲ್ಲಿ ವಿವಿಧ ದಲಿತಪರ ಸಂಘಟನೆಗಳ ಮುಖಂಡರು ಭಾಗಿಯಾಗಿದ್ದರು. ಸುರೇಶ ಕುಮಾರ್ ಅಂಬೇಡ್ಕರ್ ಬಗ್ಗೆ ಅವಹೇಳನಕಾರಿ ಮಾತನಾಡಿದ್ದಾರೆ.
ಅವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಹಾಗೂ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ಅವರನ್ನು ವಜಾ ಮಾಡಬೇಕು ಎಂದು ಆಗ್ರಹಿಸಿದರು.