ETV Bharat / state

ಗಂಗಾವತಿ ಕ್ಷೇತ್ರಕ್ಕೆ ಇಕ್ಬಾಲ್ ಅನ್ಸಾರಿಯೇ ಕಾಂಗ್ರೆಸ್‌ ಅಭ್ಯರ್ಥಿ: ಶಾಸಕ ಹಿಟ್ನಾಳ್

ಗಂಗಾವತಿ ವಿಧಾನಸಭಾ ಕ್ಷೇತ್ರದಲ್ಲಿ ಉತ್ತಮವಾಗಿ ಪಕ್ಷ ಮತ್ತು ಕಾರ್ಯಕರ್ತರನ್ನು ಸಂಘಟನೆ ಮಾಡಿರುವ ಮಾಜಿ ಸಚಿವ ಇಕ್ಬಾಲ್ ಅನ್ಸಾರಿಯೇ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾಗಲಿದ್ದಾರೆ. ಈ ಬಗ್ಗೆ ಹೈಕಮಾಂಡ್ ಕೂಡ ಗ್ನೀನ್ ಸಿಗ್ನಲ್ ನೀಡಿದೆ ಎಂದು ಶಾಸಕ ರಾಘವೇಂದ್ರ ಹಿಟ್ನಾಳ್ ತಿಳಿಸಿದ್ದಾರೆ..

Iqbal Ansari is Congress candidate for Gangavati: says raghavendra hitnal
ಗಂಗಾವತಿ ಕ್ಷೇತ್ರಕ್ಕೆ ಇಕ್ಬಾಲ್ ಅನ್ಸಾರಿಯೇ ಕೈ ಅಭ್ಯರ್ಥಿ: ಶಾಸಕ ಹಿಟ್ನಾಳ್
author img

By

Published : Apr 22, 2022, 1:05 PM IST

ಗಂಗಾವತಿ (ಕೊಪ್ಪಳ) : ಕಾಂಗ್ರೆಸ್ ಪಕ್ಷದಿಂದ ಗಂಗಾವತಿ ವಿಧಾನಸಭಾ ಕ್ಷೇತ್ರಕ್ಕೆ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬ ಚರ್ಚೆಗೆ ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ್ ಪ್ರತಿಕ್ರಿಯೆ ನೀಡಿದ್ದಾರೆ. ಮಾಜಿ ಸಚಿವ ಇಕ್ಬಾಲ್ ಅನ್ಸಾರಿಯೇ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾಗಲಿದ್ದಾರೆ ಎಂದು ತಿಳಿಸಿದ್ದಾರೆ.

ನಗರಕ್ಕೆ ಆಗಮಿಸಿದ್ದ ಅವರು ಮಾಧ್ಯಮದವರೊಂದಿಗೆ ಈ ಬಗ್ಗೆ ಮಾತನಾಡಿ, ಇತ್ತೀಚೆಗೆ ಗಂಗಾವತಿಗೆ ಆಗಮಿಸಿದ್ದ ಬಿ.ಕೆ ಹರಿಪ್ರಸಾದ್ ಅವರಿಗೆ ಕೆಲವರು ಇಬ್ಬಾಲ್ ಅನ್ಸಾರಿಗೆ ಟಿಕೆಟ್ ನೀಡುವುದು ಬೇಡ ಎಂದು ದೂರು ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ, ಇವೆಲ್ಲ ಸುಳ್ಳು. ಗಂಗಾವತಿ ವಿಧಾನಸಭಾ ಕ್ಷೇತ್ರದಲ್ಲಿ ಉತ್ತಮವಾಗಿ ಪಕ್ಷ ಮತ್ತು ಕಾರ್ಯಕರ್ತರನ್ನು ಸಂಘಟನೆ ಮಾಡಿರುವ ಮಾಜಿ ಸಚಿವ ಇಕ್ಬಾಲ್ ಅನ್ಸಾರಿಯೇ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾಗಲಿದ್ದಾರೆ. ಈ ಬಗ್ಗೆ ಹೈಕಮಾಂಡ್ ಕೂಡ ಗ್ನೀನ್ ಸಿಗ್ನಲ್ ನೀಡಿದೆ ಎಂದರು.

ಇದನ್ನೂ ಓದಿ: 'ಮುನ್ನಾಭಾಯ್' ಸ್ಟೈಲ್​​ನಲ್ಲಿ ಪಿಎಸ್ಐ ಪರೀಕ್ಷೆ ಬರೆದಿದ್ದ ಅಭ್ಯರ್ಥಿಗಳು : ಬಂಧಿತರ ಸಂಖ್ಯೆ 12ಕ್ಕೆ ಏರಿಕೆ

ಜೆಡಿಎಸ್ ಪಕ್ಷದಲ್ಲಿ ರಾಜ್ಯ ಉಪಾಧ್ಯಕ್ಷ ಹುದ್ದೆಯಲ್ಲಿದ್ದ ಮಾಜಿ ಶಾಸಕ ಹೆಚ್.ಆರ್. ಶ್ರೀನಾಥ್ ಕಾಂಗ್ರೆಸ್ ಪಕ್ಷಕ್ಕೆ ಬರುವ ತಯಾರಿಯಲ್ಲಿದ್ದು, ಟಿಕೆಟ್ ಅಕಾಂಕ್ಷಿಯಾಗಿದ್ದಾರೆ. ಅಲ್ಲದೇ ಮಾಜಿ ಸಚಿವ ಮಲ್ಲಿಕಾರ್ಜುನ ನಾಗಪ್ಪ, ಉದ್ಯಮಿ ಕೆ. ಕಾಳಪ್ಪ ಕೂಡ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಗಳಾಗಿದ್ದಾಕೆ. ಈಗ ಶಾಸಕ ಹಿಟ್ನಾಳ್ ಅವರ ಈ ಹೇಳಿಕೆ ಸಂಚಲನ ಮೂಡಿಸಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.