ETV Bharat / state

ಶ್ರೀ ಗವಿಸಿದ್ದೇಶ್ವರ ಜಾತ್ರೆಯಲ್ಲಿ ಪಾಲ್ಗೊಂಡಿರುವುದು ನನ್ನ ಪೂರ್ವಜನ್ಮದ ಪುಣ್ಯ: ಸಚಿವ ಬಿ.ಸಿ. ಪಾಟೀಲ್

ಶ್ರೀ ಗವಿಸಿದ್ದೇಶ್ವರ ಜಾತ್ರೆಯನ್ನು ಬೇರೊಂದು ಜಾತ್ರೆಗೆ ಹೋಲಿಕೆ ಮಾಡಲು ಆಗುವುದಿಲ್ಲ. ಅಂತಹ ದೊಡ್ಡ ಜಾತ್ರೆ ಇದು‌ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಬಣ್ಣಿಸಿದ್ದಾರೆ.

BC Patil
ಕೃಷಿ ಸಚಿವ ಬಿ.ಸಿ. ಪಾಟೀಲ್
author img

By

Published : Jan 30, 2021, 12:58 PM IST

ಕೊಪ್ಪಳ: ಪ್ರಸಿದ್ಧ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಜಾತ್ರೆಯಲ್ಲಿ ಪಾಲ್ಗೊಂಡಿರುವುದು ನನ್ನ ಪೂರ್ವಜನ್ಮದ ಪುಣ್ಯ ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದ್ದಾರೆ.

ಕೃಷಿ ಸಚಿವ ಬಿ.ಸಿ. ಪಾಟೀಲ್ ಪ್ರತಿಕ್ರಿಯೆ

ಕೊರೊನಾ ಸೋಂಕು ಭೀತಿ ಹಿನ್ನೆಲೆಯಲ್ಲಿ ಇದೇ ಮೊದಲ ಬಾರಿಗೆ ಬೆಳಗಿನ ವೇಳೆಯಲ್ಲಿ ನಡೆದ ಶ್ರೀ ಗವಿಸಿದ್ದೇಶ್ವರ ಮಹಾರಥೋತ್ಸವದಲ್ಲಿ ತಮ್ಮ ಪತ್ನಿಯೊಂದಿಗೆ ಪಾಲ್ಗೊಂಡಿದ್ದ ಅವರು ಗವಿಮಠದಿಂದ ಸ್ಥಾಪಿಸಲಾಗಿರುವ 24*7 ಡಿಜಿಟಲ್ ಲೈಬ್ರರಿಯನ್ನು ಉದ್ಘಾಟಿಸಿದರು.

ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವರು, ಗವಿಸಿದ್ದಶ್ವರ ಜಾತ್ರೆಯನ್ನು ಬೇರೊಂದು ಜಾತ್ರೆಗೆ ಹೋಲಿಕೆ ಮಾಡಲು ಆಗುವುದಿಲ್ಲ. ಅಂತಹ ದೊಡ್ಡ ಜಾತ್ರೆ ಇದು‌. ಶ್ರೀಮಠದ ಪೀಠಾಧಿಪತಿಗಳಾದ ಶ್ರೀ ಗವಿಸಿದ್ದೇಶ್ವರ ಮಹಾಸ್ವಾಮಿಗಳು ಆಧುನಿಕ, ವೈಜ್ಞಾನಿಕ ಮನೋಭಾವದವರಾಗಿದ್ದಾರೆ. ಅವರ ಧರ್ಮ ಕಾರ್ಯ, ಶೈಕ್ಷಣಿಕ ಕಾರ್ಯಗಳು ಅಭಿನಂದನೀಯ ಎಂದರು.

ಕೊರೊನಾ ಭೀತಿ ನಡೆವೆ ಭಕ್ತರ ಆರೋಗ್ಯದ ದೃಷ್ಟಿಯಿಂದ ಕೋವಿಡ್​ ನಿಯಮಗಳನ್ನು ಪಾಲಿಸುವ ಮೂಲಕ ಜಾತ್ರೆ ಆಚರಣೆ ಮಾಡಲಾಗುತ್ತಿದೆ. ರಥೋತ್ಸವ ಬೆಳಗ್ಗೆ ನಡೆದರೂ ಇಷ್ಟೊಂದು ಪ್ರಮಾಣದಲ್ಲಿ ಭಕ್ತರು ಸೇರಿದ್ದಾರೆ. ನಾನು ಜಿಲ್ಲಾ ಉಸ್ತುವಾರಿ ಸಚಿವನಾಗಿರದಿದ್ದರೆ ಈ ಜಾತ್ರೆಗೆ ಬರುತ್ತಿದ್ದೇನೋ ಇಲ್ಲವೋ ಗೊತ್ತಿಲ್ಲ. ಅದರೆ ಈ ಬಾರಿ ಶ್ರೀ ಗವಿಸಿದ್ದೇಶ್ವರ ಜಾತ್ರೆಯಲ್ಲಿ ಪಾಲ್ಗೊಂಡಿರೋದು ನನ್ನ ಪುಣ್ಯ ಎಂದು ತಿಳಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.