ETV Bharat / state

ಬಿಜೆಪಿ ದುರಾಡಳಿತಕ್ಕೆ ಜನರು ತಕ್ಕ ಉತ್ತರ ನೀಡಿದ್ದಾರೆ: ಗಾಲಿ ಜನಾರ್ದನ ರೆಡ್ಡಿ

ಜನರು ಸ್ಪಷ್ಟ ಬಹುಮತದ ಸರ್ಕಾರವನ್ನು ಅಧಿಕಾರಕ್ಕೆ ತರಬೇಕು ಎಂದು ಕಾಂಗ್ರೆಸ್​ ಪಕ್ಷವನ್ನು ಗೆಲ್ಲಿಸಿದ್ದಾರೆ ಎಂದು ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಹೇಳಿದ್ದಾರೆ.

janardhan-reddy-spoke-after-win-from-gangavathi
ಬಿಜೆಪಿ ದುರಾಡಳಿತಕ್ಕೆ ಜನರು ತಕ್ಕ ಉತ್ತರ ನೀಡಿದ್ದಾರೆ : ಗಾಲಿ ಜನಾರ್ದನ ರೆಡ್ಡಿ
author img

By

Published : May 13, 2023, 7:24 PM IST

ಬಿಜೆಪಿ ದುರಾಡಳಿತಕ್ಕೆ ಜನರು ತಕ್ಕ ಉತ್ತರ ನೀಡಿದ್ದಾರೆ : ಗಾಲಿ ಜನಾರ್ದನ ರೆಡ್ಡಿ

ಕೊಪ್ಪಳ : ಬಿಜೆಪಿ ಸರ್ಕಾರದ ದುರಹಂಕಾರ, ದುರಾಡಳಿತ ಮತ್ತು ಭ್ರಷ್ಟಾಚಾರದಿಂದಾಗಿ ಈ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲು ಕಂಡಿದೆ. ರಾಜ್ಯದ ಜನತೆ ಒಂದು ಸ್ಪಷ್ಟ ಬಹುಮತದ ಸರ್ಕಾರವನ್ನು ಅಧಿಕಾರಕ್ಕೆ ತರಬೇಕು ಎಂದು ನಿರ್ಧರಿಸಿರುವುದು ಈ ಚುನಾವಣೆಯ ಫಲಿತಾಂಶದಿಂದ ಗೊತ್ತಾಗುತ್ತದೆ ಎಂದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ ಗಾಲಿ ಜನಾರ್ದನ ರೆಡ್ಡಿ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಬಳ್ಳಾರಿಯಿಂದ ಗಂಗಾವತಿ ಜನರನ್ನು ನಂಬಿಕೊಂಡು ಬಂದಿದ್ದೆ. ನನ್ನ ಕೈ ಬಿಡದೇ ಇಲ್ಲಿನ ಜನರು ನನ್ನನ್ನು ಗೆಲ್ಲಿಸಿದ್ದಾರೆ. ಗಂಗಾವತಿಯಲ್ಲಿ ನಾನು ಊಹಿಸಿಕೊಂಡಿದ್ದಕ್ಕಿಂತ ಕಡಿಮೆ ಅಂತರದಲ್ಲಿ ಗೆಲುವು ಉಂಟಾಗಿದೆ. ನನ್ನ ಗೆಲುವಿಗೆ ಕಾರಣರಾದ ಗಂಗಾವತಿ ಜನತೆಗೆ ಧನ್ಯವಾದ ಅರ್ಪಿಸುತ್ತೇನೆ ಎಂದು ಹೇಳಿದರು.

ಕಳೆದ ಕೆಲವು ವರ್ಷಗಳಿಂದ ರಾಜ್ಯದಲ್ಲಿ ಅತಂತ್ರ ಸರ್ಕಾರಗಳು ಆಡಳಿತಕ್ಕೆ ಬರುತ್ತಿದ್ದವು. ಈ ಸರ್ಕಾರಗಳು ಸರಿಯಾದ ಆಡಳಿತ ನಡೆಸಿಲ್ಲ. ಅಲ್ಲದೇ ಬಿಜೆಪಿ ಸರ್ಕಾರಕ್ಕೆ ಬಹುಮತ ಬಂದರೂ ಇಲ್ಲಿನ ಭ್ರಷ್ಟಾಚಾರ, ದುರಾಡಳಿತದಿಂದಾಗಿ ಜನರು ಒಂದು ಪಕ್ಷಕ್ಕೆ ಸ್ಪಷ್ಟ ಬಹುಮತ ನೀಡಬೇಕೆಂದು ನಿರ್ಧರಿಸಿದ್ದಾರೆ. ಈ ಮೂಲಕ ಕಾಂಗ್ರೆಸ್​ ಪಕ್ಷಕ್ಕೆ ಸಂಪೂರ್ಣ ಬಹುಮತ ನೀಡಬೇಕು ಎಂದು ಜನರು ತೀರ್ಮಾನಿಸಿರುವುದು ಈ ರಿಸಲ್ಟ್​ನಿಂದ ಗೊತ್ತಾಗುತ್ತದೆ ಎಂದರು.

ಇದನ್ನೂ ಓದಿ : ಭದ್ರನೆಲೆಯಲ್ಲಿ ಬಿಜೆಪಿಗೆ 2 ಕ್ಷೇತ್ರ ನಷ್ಟ: ಪುತ್ತೂರು, ಮಂಗಳೂರು 'ಕೈ' ವಶ

ಬಿಜೆಪಿಗರು ತಾವು ಮಾಡಿದ ಪಾಪದ ಫಲವನ್ನು ಉಣ್ಣುವ ಸಮಯ ಬಂದಿದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಕಣ್ಣೀರು ಹಾಕಿಸಿ ಅಧಿಕಾರದಿಂದ ಕೆಳಗಿಳಿಸಿದರು. ಸಜ್ಜನ ರಾಜಕಾರಣಿ ಜಗದೀಶ್​ ಶೆಟ್ಟರ್​ ಅವರನನು ಪಕ್ಷದಿಂದ ದೂರವಿಟ್ಟರು. ಪಕ್ಷಕ್ಕಾಗಿ ಶ್ರಮಿಸಿದ ನನ್ನಂಥವರನ್ನು ಪಕ್ಷದಿಂದ ದೂರವಿಟ್ಟರು. ಇದೇ ಕಾರಣಕ್ಕೆ ಬಿಜೆಪಿ ಅಧಿಕಾರ ಕಳೆದುಕೊಂಡಿದೆ. ಬಿಜೆಪಿ ಸೋಲಿಗೆ ಬಿ. ಎಲ್ ಸಂತೋಷ ಮಾತ್ರ ಹೊಣೆ ಮಾಡಲು ಆಗುವುದಿಲ್ಲ. ಅವರಿಗೆ ಬೆಂಬಲಿಸಿದವರೂ ಕಾರಣವಾಗುತ್ತಾರೆ ಎಂದು ಟೀಕಿಸಿದರು.

ಕಲ್ಯಾಣ ರಾಜ್ಯ ಪ್ರಗತಿ ಪಕ್ಷ (ಕೆಆರ್ ಪಿಪಿ)ದಿಂದ ಒಬ್ಬಂಟಿಯಾಗಿ ವಿಧಾನಸಭೆಗೆ ಕಾಲಿಡುತ್ತಿದ್ದೇನೆ. ಕೊನೆ ಉಸಿರು ಇರುವವರಿಗೂ ಕೆಆರ್ ಪಿಪಿ ಪಕ್ಷವನ್ನು ಕಟ್ಟುತ್ತೇನೆ. ಬರುವ ದಿನಗಳಲ್ಲಿ ನಮ್ಮ ಪಕ್ಷವನ್ನು ಅಧಿಕಾರಕ್ಕೆ ತರುತ್ತೇನೆ ಎಂದು ಹೇಳಿದರು.

ಗಂಗಾವತಿ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುವೆ : ಗಂಗಾವತಿಯಲ್ಲಿ ಕೋಮು ಪ್ರಚೋದನೆಗೆ ಅವಕಾಶ ನೀಡುವುದಿಲ್ಲ. ಕಾಂಗ್ರೆಸ್ ಪಕ್ಷದ ಆಡಳಿತಕ್ಕೆ ಸಂಪೂರ್ಣ ಬೆಂಬಲ ನೀಡುತ್ತೇನೆ. ಜನ ಒಂದೇ ಪಕ್ಷಕ್ಕೆ ಬಹುಮತ ನೀಡಿದ್ದಾರೆ. ಗಂಗಾವತಿ ಕ್ಷೇತ್ರದ ಅಭಿವೃದ್ಧಿಗೆ ಸರಕಾರ ಸಹಕಾರ ನೀಡುತ್ತದೆ ಎಂಬ ಭರವಸೆ ಹೊಂದಿದ್ದೇನೆ. ಗಂಗಾವತಿಯ ಸಮಗ್ರ ಅಭಿವೃದ್ಧಿಗಾಗಿ ಶ್ರಮಿಸುತ್ತೇನೆ. ಬಳ್ಳಾರಿಯಲ್ಲಿ ನನ್ನ ಪತ್ನಿ ಸೋಲು ದುಃಖ ತಂದಿದೆ ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದರು.

ಇದನ್ನೂ ಓದಿ : 'ಜನ ಮತಹಾಕಿ ವಿಶ್ವಾಸ ತೋರಿಸಿದ್ದಾರೆ, ಭರವಸೆಗಳನ್ನು ಬೇಗ ಈಡೇರಿಸುವ ಜವಾಬ್ದಾರಿ ಇದೆ'

ETV Bharat Logo

Copyright © 2024 Ushodaya Enterprises Pvt. Ltd., All Rights Reserved.