ಗಂಗಾವತಿ: ಜಯನಗರದಲ್ಲಿ ಒಂದೇ ವಾರದಲ್ಲಿ ನಡೆದ ಆರು ಸರಣಿ ಕಳ್ಳತನ ನಡೆದಿದೆ. ಕಳ್ಳರನ್ನು ಪತ್ತೆ ಹಚ್ಚಿ ಬಂಧಿಸುವಲ್ಲಿ ಪೊಲೀಸರು ಸಂಪೂರ್ಣ ವಿಫಲರಾಗಿದ್ದಾರೆ ಎಂದು ಆರೋಪಿಸಿ ಜಯನಗರ ನಿವಾಸಿಗಳು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ದೂರು ನೀಡಿದ್ದಾರೆ.
ಒಂದೇ ವಾರದಲ್ಲಿ ಜಯನಗರ ಒಂದರಲ್ಲಿಯೇ ಆರು ಮನೆಗಳಲ್ಲಿ ಕಳ್ಳತನವಾಗಿದೆ. ಇದರಿಂದ ಸಹಜವಾಗಿ ಜನರಲ್ಲಿ ಮತ್ತಷ್ಟು ಕಳ್ಳತನ ನಡೆಯುವ ಆತಂಕ ಎದುರಾಗಿದೆ. ಈಗಾಗಲೇ ಬೆರಳಚ್ಚು, ಶ್ವಾನದಳ ಘಟನಾ ಸ್ಥಳಕ್ಕೆ ಭೇಟಿ ನೀಡಿ ತೆರಳಿದ್ದಾರೆ. ಆದರೆ, ಯಾವ ಪ್ರಯೋಜನವೂ ಆಗಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು.