ಕೊಪ್ಪಳ: ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಪತ್ರಕರ್ತ ತಿಪ್ಪನಗೌಡ ಮಾಲಿಪಾಟೀಲ್ (42) ಸಾವಿಗೀಡಾಗಿದ್ದಾರೆ.
ಪತ್ರಿಕೆಯೊಂದರ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದ ಇವರಿಗೆ ಕಳೆದ ವಾರ ಕೊರೊನಾ ವೈರಸ್ ಸೋಂಕು ದೃಢಪಟ್ಟಿತ್ತು. ಐದು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ತಿಪ್ಪನಗೌಡ ಸಾವನ್ನಪ್ಪಿದ್ದಾರೆ.
ಮೂಲತಃ ಕೊಪ್ಪಳ ತಾಲೂಕಿನ ಬಿಕನಳ್ಳಿ ಗ್ರಾಮದವರಾದ ಇವರಿಗೆ ಇಬ್ಬರು ಪುಟ್ಟ ಮಕ್ಕಳಿದ್ದಾರೆ.