ಗಂಗಾವತಿ (ಕೊಪ್ಪಳ): ಪ್ರಕೃತಿಯ ಸಂರಕ್ಷಣೆ ಪರಿಸರ ದಿನಾಚರಣೆಯ ಒಂದು ದಿನಕ್ಕೆ ಸೀಮಿತವಾಗದೇ ನಿತ್ಯ ಪ್ರಕೃತಿಯನ್ನು ಸಂರಕ್ಷಿಸುವ ಹೊಣೆ ನಮ್ಮದು ಎಂದು ನ್ಯಾಯಾಲಯದಲ್ಲಿ ನ್ಯಾಯಮೂರ್ತಿಗಳು ಪ್ರತಿಜ್ಞೆ ಸ್ವೀಕರಿಸಿ, ಅಲ್ಲಿ ನೆರದವರಿಂದಲೂ ಪ್ರಮಾಣ ವಚನ ಮಾಡಿಸಿದರು.
ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಇಲ್ಲಿನ ಪ್ರಧಾನ ಸಿವಿಲ್ ನ್ಯಾಯಾಲಯದಲ್ಲಿ ಅರಣ್ಯ ಹಾಗೂ ನ್ಯಾಯಾಲಯ ಇಲಾಖೆ ಹಮ್ಮಿಕೊಂಡಿದ್ದ ಕಾರ್ಯಕ್ರಮಕ್ಕೆ ನ್ಯಾಯಮೂರ್ತಿಗಳು ಸಸಿ ನೆಡುವ ಮೂಲಕ ಚಾಲನೆ ನೀಡಿದರು.
ಬಳಿಕ ನ್ಯಾಯಮೂರ್ತಿಗಳಾದ ಎಂ.ಜಿ. ಶಿವಳ್ಳಿ, ಎಚ್.ಡಿ. ಗಾಯತ್ರಿ, ಜಿ. ಅನಿತಾ ಹಾಗೂ ಆರ್.ಎಂ. ನದಾಫ್ ಅವರು ನಿತ್ಯವೂ ಪರಿಸರದ ಬಗ್ಗೆ ಕಾಳಜಿ ವಹಿಸುವ ಬಗ್ಗೆ ಪ್ರಮಾಣ ವಚನ ಸ್ವೀಕರಿಸಿದರು. ಇದೇ ಸಂದರ್ಭದಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿ ಹಾಗೂ ವಕೀಲರು ಕೂಡ ಪರಿಸರ ಸಂರಕ್ಷಣೆಯ ಪ್ರತಿಜ್ಞೆ ಮಾಡಿದರು.