ಗಂಗಾವತಿ: ಇಲ್ಲಿನ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ, ಜೆಎಂಎಫ್ಸಿ ಹಾಗೂ ಹೆಚ್ಚುವರಿ ಸಿವಿಲ್ ನ್ಯಾಯಾಲಯಗಳ ನ್ಯಾಯಾಧೀಶರನ್ನು ಸರ್ಕಾರ ಏಕಕಾಲಕ್ಕೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಸಿವಿಲ್ ನ್ಯಾಯಾಲಯದಲ್ಲಿ ನ್ಯಾಯಾಧೀಶರಾಗಿದ್ದ ಜಿ.ಅನಿತಾ ಅವರ ಸ್ಥಾನಕ್ಕೆ ಬೆಂಗಳೂರಿನ ಮೆಟ್ರೋಪಾಲಿಟನ್ ನ್ಯಾಯಾಲಯದಲ್ಲಿ ಹೆಚ್ಚುವರಿ ಮುಖ್ಯ ನ್ಯಾಯಾಧೀಶರಾಗಿದ್ದ ವಿ.ನಾಗರಾಜ್ ಅವರನ್ನು ನಿಯೋಜಿಸಲಾಗಿದೆ. ಹೆಚ್ಚುವರಿ ಸಿವಿಲ್ ಜೆಎಂಎಫ್ಸಿ ನ್ಯಾಯಾಲಯದಲ್ಲಿ ನ್ಯಾಯಾಧೀಶೆಯಾಗಿದ್ದ ಹೆಚ್.ಡಿ.ಗಾಯತ್ರಿ ಅವರಿಂದ ತೆರವಾದ ಸ್ಥಾನಕ್ಕೆ ಮೈಸೂರಿನ ಜೆಎಂಎಫ್ಸಿ ಮೂರನೇ ಕೋರ್ಟ್ನ ನ್ಯಾಯಾಧೀಶೆ ಗೌರಮ್ಮ ಅವರನ್ನು ನಿಯೋಜಿಸಲಾಗಿದೆ.
ಇಲ್ಲಿನ ಮುಖ್ಯ ಜೆಎಂಎಫ್ಸಿ ನ್ಯಾಯಾಲಯದ ನ್ಯಾಯಾಧೀಶರಾಗಿದ್ದ ರಹೇಮಲಿ ಮೌಲಸಾಬ (ಆರ್.ಎಂ.) ನದಾಫ್ ಅವರ ಸ್ಥಾನಕ್ಕೆ ಹುಬ್ಬಳ್ಳಿಯ ಜೆಎಂಎಫ್ಸಿ 2ನೇ ಕೋರ್ಟ್ನ ನ್ಯಾಯಾಧೀಶರಾಗಿದ್ದ ವಿಶ್ವನಾಥ್ ವಿ. ಮುಗಟ್ಟಿ ಅವರನ್ನು ನಿಯೋಜಿಸಲಾಗಿದೆ.
ಓದಿ: ರೈತರು-ಪೊಲೀಸರ ಮಧ್ಯೆ ವಾಗ್ವಾದ: 30ಕ್ಕೂ ಹೆಚ್ಚು ರೈತರ ಮೇಲೆ ಪ್ರಕರಣ