ಕೊಪ್ಪಳ/ವಿಜಯನಗರ: ಕಲ್ಯಾಣ ಕರ್ನಾಟಕದಲ್ಲಿ ಇಂದು 75ನೇ ಕಲ್ಯಾಣ ಕರ್ನಾಟಕ ಉತ್ಸವ ಸಂಭ್ರಮದಿಂದ ಆಚರಿಸಲಾಯಿತು. ಕಲಬುರಗಿ, ಕೊಪ್ಪಳ, ವಿಜಯನಗರ, ಬಳ್ಳಾರಿಯಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ಆಚರಿಸಲಾಯಿತು.
ಕೊಪ್ಪಳ ಜಿಲ್ಲಾಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ರಾಷ್ಟ್ರೀಯ ಧ್ವಜಾರೋಹಣ ನೆರವೇರಿಸುವ ಮೂಲಕ ಕಲ್ಯಾಣ ಕರ್ನಾಟಕ ಉತ್ಸವ ಆಚರಿಸಿದರು. ಸಂಸದ ಕರಡಿ ಸಂಗಣ್ಣ, ಶಾಸಕ ರಾಘವೇಂದ್ರ ಹಿಟ್ನಾಳ್, ಡಿಸಿ, ಎಸ್ಪಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಭಾಗಿಯಾಗಿದ್ದರು.
ವಿಜಯನಗರ: ಹೊಸಪೇಟೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಅಣ್ಣಾಸಾಹೇಬ್ ಜೊಲ್ಲೆ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. ನಂತರ ವಿವಿಧ ತುಕಡಿಗಳಿಂದ ಗೌರವ ವಂದನೆ ಸ್ವೀಕರಿಸಿದರು. ಈ ವೇಳೆ, ಆಕರ್ಷಕ ಪಥಸಂಚಲನ ಗಮನ ಸೆಳೆಯಿತು. ಪೊಲೀಸ್, ಗೃಹರಕ್ಷಕ ದಳ, ಎನ್ಸಿಸಿ, ಸ್ಕೌಟ್ಸ್ ಮತ್ತು ಗೈಡ್ಸ್ ಪಥ ಸಂಚಲನ ನಡೆಯಿತು.
ಬಳಿಕ ಮಾತನಾಡಿದ ಸಚಿವೆ ಶಶಿಕಲಾ, ಕಲ್ಯಾಣ ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಲು ಸಂವಿಧಾನಕ್ಕೆ ತಿದ್ದುಪಡಿ ತಂದ ನಂತರ ಮೀಸಲಾತಿ ಫಲವಾಗಿ ಈ ಭಾಗದ ವಿದ್ಯಾರ್ಥಿಗಳಿಗೆ ಶಿಕ್ಷಣ, ಉದ್ಯೋಗದಲ್ಲಿ ಅನುಕೂಲವಾಗಿದೆ ಎಂದು ಹೇಳಿದರು. ಸಂಸದ ದೇವೇಂದ್ರಪ್ಪ ಸೇರಿದಂತೆ ಅಧಿಕಾರಿಗಳು ಭಾಗವಹಿಸಿದ್ದರು.
(ಇದನ್ನೂ ಓದಿ: ಸೆ.17 ಹೈದರಾಬಾದ್ ವಿಮೋಚನಾ ದಿನ: ರಜಾಕಾರರ ರಕ್ತಸಿಕ್ತ ಇತಿಹಾಸ, ಹೋರಾಟದ ಹೆಜ್ಜೆಗುರುತುಗಳು)