ಗಂಗಾವತಿ: ರಾಜ್ಯದಲ್ಲಿ ಕೊರೊನಾ ಪರಿಸ್ಥಿತಿ ಸುಧಾರಣೆಗೆ ಬರುವವರೆಗೂ ಹತ್ತನೇ ತರಗತಿ ಮಕ್ಕಳಿಗೆ ಪರೀಕ್ಷೆ ನಡೆಸಬಾರದು ಎಂದು ಕರವೇ ಸಂಘಟನೆಯ ಪದಾಧಿಕಾರಿಗಳು ಶಿಕ್ಷಣ ಇಲಾಖೆಯನ್ನು ಒತ್ತಾಯಿಸಿದರು.
ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಪಂಪಣ್ಣ ನಾಯಕ್ ನೇತೃತ್ವದಲ್ಲಿ ಇಲ್ಲಿನ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಗೆ ತೆರಳಿ ಬಿಇಒ ಸೋಮಶೇಖರಗೌಡ ಅವರಿಗೆ ಮನವಿ ಸಲ್ಲಿಸಿದ ಸಂಘಟಕರು, ಯಾವುದೇ ಕಾರಣಕ್ಕೂ ಕೊರೊನಾ ಪರಿಸ್ಥಿತಿ ಸುಧಾರಣೆಗೆ ಬರುವವರೆಗೂ ಪರೀಕ್ಷೆ ನಡೆಸಬಾರದು. ಪರೀಕ್ಷೆ ನಡೆಸಿದರೆ ಅದರಿಂದ ಮಕ್ಕಳಿಗೆ ಆರೋಗ್ಯದ ಸಮಸ್ಯೆ ಉದ್ಭವಿಸಬಹುದು. ಇದಕ್ಕೆ ಶಿಕ್ಷಣ ಇಲಾಖೆಯೇ ಮುಖ್ಯ ಕಾರಣವಾಗಲಿದೆ. ಹಾಗಾಗಿ ಪರೀಕ್ಷೆ ನಡೆಸಬಾರದು ಎಂದು ಒತ್ತಾಯಿಸಿದರು.