ಕುಷ್ಟಗಿ (ಕೊಪ್ಪಳ): ಪಟ್ಟಣದ ಕೊಪ್ಪಳ ರಸ್ತೆಯ ಕಾರ್ಗಿಲ್ ಯೋಧ ಮೇಗಳಮಠ ವೃತ್ತದಲ್ಲಿ ಭಾನುವಾರ ಕುಷ್ಟಗಿ ತಾಲೂಕು ಮಾಜಿ ಸೈನಿಕರ ಸಂಘದಿಂದ ಕಾರ್ಗಿಲ್ ವಿಜಯ್ ದಿವಸ್ ಆಚರಿಸಲಾಯಿತು.
ಕಾರ್ಗಿಲ್ ಹುತಾತ್ಮ ಯೋಧರಿಗೆ ಪುಷ್ಪಾರ್ಪಣೆಯ ಗೌರವ ಸಲ್ಲಿಸಿ ಮಾತನಾಡಿದ ಸಿಪಿಐ ಜಿ. ಚಂದ್ರಶೇಖರ್, ದೇಶ ಇಂದು ಕಾರ್ಗಿಲ್ ವಿಜಯ ದಿವಸವನ್ನು ಆಚರಿಸುತ್ತಿದೆ. ದೇಶಕ್ಕಾಗಿ ಹುತಾತ್ಮರಾದ ಎಲ್ಲಾ ಭಾರತೀಯ ಸೈನಿಕರಿಗೂ ಇಂದು ವಿಶೇಷವಾಗಿ ನಮ್ಮ ಗೌರವ ನಮನಗಳನ್ನು ಸಲ್ಲಿಸೋಣ. ಭಾರತೀಯ ಸೇನಾಪಡೆಗಳ ವೀರ ಯೋಧರಿಗೆ ಮತ್ತು ಅವರ ಕುಟುಂಬದವರಿಗೆ ಬೆಂಬಲ ಹಾಗೂ ಹೆಮ್ಮೆಯ ಅಭಿನಂದನೆಗಳನ್ನು ಸಲ್ಲಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು.
ಮಾಜಿ ಸೈನಿಕರ ಸಂಘದ ಅಧ್ಯಕ್ಷ ಹಂಪನಗೌಡ ಬಳೂಟಗಿ ಸೇರಿದಂತೆ ತಾಲೂಕಿನ ಮಾಜಿ ಸೈನಿಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಿಹಿ ಹಂಚಿ ಸಂಭ್ರಮಿಸಿದರು.