ಕುಷ್ಟಗಿ(ಕೊಪ್ಪಳ): ತಾಲೂಕಿನ ತಳುವಗೇರಾ ಗ್ರಾಮದಲ್ಲಿ ಕೃಷ್ಣ ಭಾಗ್ಯ ಜಲ ನಿಗಮದಡಿ ಕೈಗೆತ್ತಿಕೊಳ್ಳಲಾಗಿರುವ 15 ಲಕ್ಷ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಅಮರೇಗೌಡ ಪಾಟೀಲ್ ಬಯ್ಯಾಪೂರ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ತಾಲೂಕಿನ ಎಲ್ಲ ಗ್ರಾಮಗಳಿಗೂ ಮೂಲ ಸೌಕರ್ಯ ಕಲ್ಪಿಸಿಕೊಡುವುದು ತಮ್ಮ ಆದ್ಯ ಕರ್ತವ್ಯವಾಗಿದೆ. ಹಂತ ಹಂತವಾಗಿ ವಿವಿಧ ಯೋಜನೆಗಳಡಿ ಅಭಿವೃದ್ಧಿ ಕಾರ್ಯ ಮಾಡಲಾಗುವುದು ಎಂದರು.
ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯತ್ ಸದಸ್ಯ ಚನ್ನಪ್ಪ ಮೇಟಿ, ಮಾಜಿ ಗ್ರಾಮ ಪಂಚಾಯತ್ ಸದಸ್ಯೆ ಕವಿತಾ ಸಣ್ಣಸಿದ್ದನಗೌಡ್ರ, ಹಿರಿಯರಾದ ಪಂಪನಗೌಡ ಪಾಟೀಲ್, ಮಲ್ಲಿಕಾರ್ಜುನ ಮೇಟಿ, ಕಳಕಪ್ಪ ಉಂಡಿ, ಈಶ್ವರಗೌಡ ಪಾಟೀಲ್, ಕೃಷ್ಣ ಭಾಗ್ಯ ಜಲ ನಿಗಮದ ಇಂಜಿನಿಯರ್ ಯೋಗಿರಾಜ ತೇಲ್ಕರ್ ಇದ್ದರು.