ETV Bharat / state

ಇಂದು 113 ಪಾಸಿಟಿವ್ ಕೇಸ್ ಪತ್ತೆ... ಸೋಂಕಿತರ ಸಂಖ್ಯೆ 1870 ಕ್ಕೆ ಏರಿಕೆ - koppal isolation

ಇಂದು 48 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈವರೆಗೆ ಒಟ್ಟು 990 ಜನರು ಗುಣಮುಖರಾಗಿದ್ದಾರೆ. 434 ಜನ ಸೋಂಕಿತರನ್ನು ಹೋಂ ಐಸೋಲೇಷನ್‌ ಮಾಡಲಾಗಿದೆ.

ಕೊಪ್ಪಳ
ಕೊಪ್ಪಳ
author img

By

Published : Aug 5, 2020, 10:09 PM IST

ಕೊಪ್ಪಳ: ಜಿಲ್ಲೆಯಲ್ಲಿ ಇಂದು 113 ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 1870 ಕ್ಕೆ ಏರಿಕೆಯಾಗಿದೆ.

ಈ ಕುರಿತು ಮಾಹಿತಿ ನೀಡಿರುವ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಅವರು, ಗಂಗಾವತಿ ತಾಲೂಕಿನಲ್ಲಿ- 46, ಕೊಪ್ಪಳ ತಾಲೂಕಿನಲ್ಲಿ 27, ಕುಷ್ಟಗಿ ತಾಲೂಕಿನಲ್ಲಿ 18 ಹಾಗೂ ಯಲಬುರ್ಗಾ ತಾಲೂಕಿನಲ್ಲಿ 22 ಪ್ರಕರಣ ಸೇರಿ ಇಂದು ಒಟ್ಟು 113 ಪಾಸಿಟಿವ್ ಕೇಸ್ ದೃಢಪಟ್ಟಿವೆ. ಇಂದು ಇಬ್ಬರು ಸೋಂಕಿತರು ಸಾವನ್ನಪ್ಪಿದ್ದು, ಜಿಲ್ಲೆಯಲ್ಲಿ ಈವರೆಗೆ ಸೋಂಕಿನಿಂದ ಒಟ್ಟು 36 ಜನರು ಮೃತಪಟ್ಟಿದ್ದಾರೆ.

ಕೊಪ್ಪಳ ವರದಿ
ಕೊಪ್ಪಳ ವರದಿ

ಇಂದು 48 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈವರೆಗೆ ಒಟ್ಟು 990 ಜನರು ಗುಣಮುಖರಾಗಿದ್ದಾರೆ. 434 ಜನ ಸೋಂಕಿತರನ್ನು ಹೋಂ ಐಸೋಲೇಷನ್‌ ಮಾಡಲಾಗಿದೆ. ಇನ್ನುಳಿದ ಪ್ರಕರಣಗಳಿಗೆ ನಿಗದಿತ ಕೋವಿಡ್ -19 ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

ಜಿಲ್ಲೆಯಲ್ಲಿ ಈವರೆಗೆ ಒಟ್ಟು 29816 ಜನರ ಗಂಟಲು ದ್ರವದ ಮಾದರಿ ಸಂಗ್ರಹಿಸಲಾಗಿದೆ. ಈ ಪೈಕಿ 28382 ಜನರ ವರದಿ ಬಂದಿದೆ. ಇನ್ನೂ 1431 ಜನರ ಲ್ಯಾಬ್ ವರದಿ ಬರಬೇಕಿದೆ ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಅವರು ಮಾಹಿತಿ ನೀಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.