ETV Bharat / state

ಕೊಪ್ಪಳದಲ್ಲಿ 120 ಜನ ಕೊರೊನಾದಿಂದ ಗುಣಮುಖ: 4 ಮಂದಿ ಸೋಂಕಿಗೆ ಬಲಿ - 120 people cured of corona

ಕೊಪ್ಪಳ ಜಿಲ್ಲೆಯಲ್ಲಿ ಇಂದು 92 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 12,234ಕ್ಕೆ ಏರಿಕೆಯಾಗಿದೆ. ಇಂದು ನಾಲ್ಕು ಜನ ಸೋಂಕಿತರು ಸಾವನ್ನಪ್ಪಿದ್ದು,120 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಕೊಪ್ಪಳ ಜಿಲ್ಲಾಡಳಿತ ಭವನ
ಕೊಪ್ಪಳ ಜಿಲ್ಲಾಡಳಿತ ಭವನ
author img

By

Published : Oct 7, 2020, 8:27 PM IST

Updated : Oct 7, 2020, 8:37 PM IST

ಕೊಪ್ಪಳ: ಜಿಲ್ಲೆಯಲ್ಲಿ ಇಂದು 92 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 12,234ಕ್ಕೆ ಏರಿಕೆಯಾಗಿದೆ.

ಈ ಕುರಿತು ಮಾಹಿತಿ ನೀಡಿರುವ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಅವರು, ಗಂಗಾವತಿ ತಾಲೂಕಿನಲ್ಲಿ- 29, ಕೊಪ್ಪಳ ತಾಲೂಕಿನಲ್ಲಿ 23, ಕುಷ್ಟಗಿ ತಾಲೂಕಿನಲ್ಲಿ 19 ಹಾಗೂ ಯಲಬುರ್ಗಾ ತಾಲೂಕಿನಲ್ಲಿ 21 ಪ್ರಕರಣ ಸೇರಿ ಇಂದು ಒಟ್ಟು 92 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.

ಇಂದು ನಾಲ್ಕು ಜನ ಸೋಂಕಿತರು ಸಾವನ್ನಪ್ಪಿದ್ದು, ಜಿಲ್ಲೆಯಲ್ಲಿ ಈವರೆಗೆ ಸೋಂಕಿನಿಂದ ಒಟ್ಟು 255 ಜನ ಸೋಂಕಿತರು ಮೃತಪಟ್ಟಿದ್ದಾರೆ. ಇಂದು 120 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಈವರೆಗೆ ಒಟ್ಟು 10,739 ಜನರು ಗುಣಮುಖರಾಗಿದ್ದಾರೆ. 1066 ಜನ ಸೋಂಕಿತರನ್ನು ಹೋಮ್​​ ಐಸೋಲೇಷನ್‌ ಮಾಡಲಾಗಿದೆ. ಇನ್ನುಳಿದ ಪ್ರಕರಣಗಳಿಗೆ ನಿಗದಿತ ಕೋವಿಡ್ -19 ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ತಿಳಿಸಿದ್ದಾರೆ.

Last Updated : Oct 7, 2020, 8:37 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.