ಕೊಪ್ಪಳ: ಜಿಲ್ಲೆಯಲ್ಲಿ ಇಂದು 134 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 3,953ಕ್ಕೆ ಏರಿಕೆಯಾಗಿದೆ.
ಈ ಕುರಿತು ಮಾಹಿತಿ ನೀಡಿರುವ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್, ಗಂಗಾವತಿ ತಾಲೂಕಿನಲ್ಲಿ- 69, ಕೊಪ್ಪಳ 38, ಕುಷ್ಟಗಿ 21 ಹಾಗೂ ಯಲಬುರ್ಗಾ ತಾಲೂಕಿನಲ್ಲಿ 06 ಪ್ರಕರಣ ಸೇರಿ ಇಂದು ಒಟ್ಟು 134 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.
ಇಂದು ಐವರು ಸೋಂಕಿತರು ಸಾವನ್ನಪ್ಪಿದ್ದು, ಜಿಲ್ಲೆಯಲ್ಲಿ ಈವರೆಗೆ ಸೋಂಕಿನಿಂದ ಒಟ್ಟು 90 ಜನ ಮೃತಪಟ್ಟಿದ್ದಾರೆ. ಇಂದು 92 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈವರೆಗೆ ಒಟ್ಟು 2,683 ಜನರು ಗುಣಮುಖರಾಗಿದ್ದಾರೆ. 880 ಜನ ಸೋಂಕಿತರನ್ನು ಹೋಮ್ ಐಸೊಲೇಷನ್ ಮಾಡಲಾಗಿದೆ. ಇನ್ನುಳಿದ ಪ್ರಕರಣಗಳಿಗೆ ನಿಗದಿತ ಕೋವಿಡ್ -19 ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಈವರೆಗೆ ಒಟ್ಟು 41,496 ಜನರ ಗಂಟಲು ದ್ರವದ ಮಾದರಿ ಸಂಗ್ರಹಿಸಲಾಗಿದೆ. ಈ ಪೈಕಿ 40,408 ಜನರ ವರದಿ ಬಂದಿದೆ. ಇನ್ನೂ 1,079 ಜನರ ಲ್ಯಾಬ್ ವರದಿ ಬರಬೇಕಿದೆ ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಮಾಹಿತಿ ನೀಡಿದ್ದಾರೆ.