ಕೊಪ್ಪಳ: ಜಿಲ್ಲೆಯಲ್ಲಿ ಇಂದು 185 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 10826ಕ್ಕೆ ಏರಿಕೆಯಾಗಿದೆ.
ಈ ಕುರಿತು ಮಾಹಿತಿ ನೀಡಿರುವ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಅವರು, ಗಂಗಾವತಿ ತಾಲೂಕಿನಲ್ಲಿ 56, ಕೊಪ್ಪಳ ತಾಲೂಕಿನಲ್ಲಿ 64, ಕುಷ್ಟಗಿ ತಾಲೂಕಿನಲ್ಲಿ 29 ಹಾಗೂ ಯಲಬುರ್ಗಾ ತಾಲೂಕಿನಲ್ಲಿ 36 ಪ್ರಕರಣ ಸೇರಿ ಇಂದು ಒಟ್ಟು 185 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇಂದು ಒಬ್ಬ ಸೋಂಕಿತ ಸಾವನ್ನಪ್ಪಿದ್ದು, ಜಿಲ್ಲೆಯಲ್ಲಿ ಈವರೆಗೆ ಒಟ್ಟು 228 ಜನ ಸೋಂಕಿತರು ಮೃತಪಟ್ಟಿದ್ದಾರೆ.
![ಮೀಡಿಯಾ ಬುಲೆಟಿನ್](https://etvbharatimages.akamaized.net/etvbharat/prod-images/kn-kpl-06-22-positive-cases-photo-7202284_22092020190531_2209f_1600781731_943.jpg)
ಇಂದು 201 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈವರೆಗೆ ಒಟ್ಟು 8588 ಜನರು ಗುಣಮುಖರಾಗಿದ್ದಾರೆ. 1789 ಜನ ಸೋಂಕಿತರನ್ನು ಹೋಮ್ ಐಸೋಲೇಷನ್ ಮಾಡಲಾಗಿದೆ. ಇನ್ನುಳಿದ ಪ್ರಕರಣಗಳಿಗೆ ನಿಗದಿತ ಕೋವಿಡ್ -19 ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ತಿಳಿಸಿದ್ದಾರೆ.