ಕೊಪ್ಪಳ: ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಚಿರತೆಯೊಂದು ಬಿದ್ದಿರುವ ಘಟನೆ ಜಿಲ್ಲೆಯ ಕುಕನೂರು ತಾಲೂಕಿನ ಗಾವರಾಳ ಗ್ರಾಮದ ಹೊರವಲಯದಲ್ಲಿ ನಡೆದಿದೆ.
ಸೆರೆ ಸಿಕ್ಕಿರುವ ಚಿರತೆ ಸುಮಾರು ಐದು ವರ್ಷ ಪ್ರಾಯದ್ದು ಎಂದು ಅಂದಾಜಿಸಲಾಗಿದೆ. ಕಳೆದೊಂದು ತಿಂಗಳಿನಿಂದ ಗಾವರಾಳ ಸುತ್ತಮುತ್ತ ಈ ಚಿರತೆಯು ನಾಯಿ, ಕುರಿ, ಕೋತಿಗಳ ಮೇಲೆ ದಾಳಿ ನಡೆಸಿ ತಿಂದು ಹಾಕಿತ್ತು. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಗಾವರಾಳ ಗ್ರಾಮದ ಹೊರವಲಯದಲ್ಲಿ ಎರಡು ಕಡೆ ಬೋನು ಇರಿಸಿದ್ದರು. ಚಿರತೆ ಬೋನಿನಲ್ಲಿ ಸೆರೆಯಾಗಿರುವ ವಿಷಯ ತಿಳಿದು ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.