ಕೊಪ್ಪಳ: ಜಿಲ್ಲೆಯ ಭಾನಾಪುರ ಬಳಿ ನಿನ್ನೆ ತಡರಾತ್ರಿ ನಡೆದ ಅಪಘಾತದಲ್ಲಿ ಐವರು ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡ ನಾಲ್ವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತಿದೆ. ಇಂದು ಸಚಿವ ಹಾಲಪ್ಪ ಆಚಾರ್ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿ ಧೈರ್ಯ ಹೇಳಿದರು.
ಬಳಿಕ ಘಟನೆ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "ರಸ್ತೆಯಲ್ಲಿ ಸಂಚರಿಸುವಾಗ ಜಾಗೃತರಾಗಿರಬೇಕು. ಇಂತಹ ಘಟನೆಗಳು ನಡೆಯಬಾರದು, ಈ ವರ್ಷದಲ್ಲಿ ನನ್ನ ಕ್ಷೇತ್ರದಲ್ಲಿ ರೀತಿಯ ದುರ್ಘಟನೆಗಳು ನಡೆದಿರಲಿಲ್ಲ. ಈ ಕುರಿತು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುವುದು. ಜೊತೆಗೆ ಘಟನೆಗೆ ಕಾರಣವಾದ ಇನ್ನೊಂದು ವಾಹನದ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು" ಎಂದರು.
ಇದೇ ಸಂದರ್ಭದಲ್ಲಿ ಕೊಪ್ಪಳ ಗವಿಮಠದ ಶ್ರೀ ಗವಿಸಿದ್ದೇಶ್ವರ ಮಹಾಸ್ವಾಮಿಗಳು ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ಸ್ಥಿತಿ ವಿಚಾರಿಸಿ ಸಾಂತ್ವನ ಹೇಳಿದರು.
ಇದನ್ನೂ ಓದಿ: ಕೊಪ್ಪಳದಲ್ಲಿ ಭೀಕರ ರಸ್ತೆ ಅಪಘಾತ: ಸ್ಕಾರ್ಪಿಯೋದಲ್ಲಿದ್ದ ಐವರು ಸ್ಥಳದಲ್ಲೇ ಸಾವು