ಕೊಪ್ಪಳ: ನಗರದ ಸಾರ್ವಜನಿಕ ಸ್ಥಳದಲ್ಲಿಂದು ಬೆಚ್ಚಿಬೀಳಿಸುವ ಘಟನೆ ನಡೆದಿದೆ. ವಿದ್ಯುತ್ ಕಂಬದ ಮೇಲೆ ಏರಿ ನೇಣು ಬಿಗಿದುಕೊಂಡು ವ್ಯಕ್ತಿವೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಜಿಲ್ಲಾ ಕ್ರೀಡಾಂಗಣದ ಬಳಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಬೂದಗುಂಪಾ ಗ್ರಾಮದ ಸುರೇಶ ಹನುಂತಪ್ಪ ಕರಡಿ ಎಂದು ಗುರುತಿಸಲಾಗಿದೆ. ನಿನ್ನೆ ರಾತ್ರಿ ಈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಶಂಕಿಸಲಾಗಿದೆ.
ಇನ್ನು ಸ್ಥಳಕ್ಕೆ ನಗರ ಠಾಣೆಯ ಪಿಐ ಮಾರುತಿ ಗುಳ್ಳಾರಿ, ಪಿಎಸ್ಐ ನಾಗಪ್ಪ ಹಾಗೂ ಸಿಬ್ಬಂದಿ ಆಗಮಿಸಿ, ಪರಿಶೀಲನೆ ನಡೆಸಿದ್ದಾರೆ.