ಕೊಪ್ಪಳ : ಕೊರೊನಾ ಭೀತಿಯ ನಡುವೆಯೂ ರಾಜ್ಯ ಸರ್ಕಾರ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸಲು ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಎಸ್ಎಸ್ಎಲ್ಸಿ ಪರೀಕ್ಷಾ ಸಿದ್ಧತೆ ಕುರಿತು ಡಿಡಿಪಿಐ ದೊಡ್ಡಬಸಪ್ಪ ನೀರಲಕೇರಿ ಅವರು ಈಟಿವಿ ಭಾರತದೊಂದಿಗೆ ಮಾತನಾಡಿದ್ದಾರೆ.
ಜಿಲ್ಲೆಯಲ್ಲಿ ಒಟ್ಟು 80 ಪರೀಕ್ಷಾ ಕೇಂದ್ರಗಳಲ್ಲಿ 22,183 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಕೊರೊನಾ ಭೀತಿ ಹಿನ್ನೆಲೆ ಮಕ್ಕಳ ಆರೋಗ್ಯ ಹಿತದೃಷ್ಠಿಯಿಂದ ಎಲ್ಲ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈಗಾಗಲೇ ವಿದ್ಯಾರ್ಥಿಗಳ ಹಾಲ್ ಟಿಕೇಟ್ ಜೊತೆಗೆ ಪರೀಕ್ಷಾ ಕೇಂದ್ರ, ಕೊಠಡಿಯ ಮಾಹಿತಿ ನೀಡಲಾಗಿದೆ.
ಪರೀಕ್ಷಾ ದಿನದಂದು ಬೆಳಗ್ಗೆ ಥರ್ಮಲ್ ಸ್ಕೀನಿಂಗ್ ಮಾಡಿ ಪರೀಕ್ಷಾ ಕೇಂದ್ರದೊಳಗೆ ಬಿಡಲಾಗುತ್ತದೆ. ಪರೀಕ್ಷಾ ಕೊಠಡಿಯಲ್ಲಿ ಸಾಮಾಜಿಕ ಅಂತರ ಕಾಪಾಡಲಾಗುತ್ತದೆ. ಟೆಂಪರೇಚರ್ ಜಾಸ್ತಿ ಕಂಡು ಬಂದ ವಿದ್ಯಾರ್ಥಿಗಳನ್ನು ಸಪರೇಟ್ ಆಗಿ ಕೂರಿಸಿ ಪರೀಕ್ಷೆ ಬರೆಸಲಾಗುವುದು. ಪರೀಕ್ಷಾ ಕೇಂದ್ರಗಳನ್ನು ಈಗಾಗಲೇ ಸ್ವಚ್ಛಗೊಳಸಿಲಾಗಿದೆ. ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು.
ವಿದ್ಯಾರ್ಥಿಗಳು ಹಾಗೂ ಪಾಲಕರು ಯಾವುದೇ ಆತಂಕಪಡಬೇಕಿಲ್ಲ. ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಠಿಯಿಂದ ಎಲ್ಲ ಅಗತ್ಯ ಕ್ರಮ ಕೈಗೊಂಡು ಪರೀಕ್ಷೆ ನಡೆಸಲು ಸಿದ್ಧವಾಗಿದ್ದೇವೆ ಎಂದು ಡಿಡಿಪಿಐ ದೊಡ್ಡಬಸಪ್ಪ ನೀರಲಕೇರಿ ತಿಳಿಸಿದ್ದಾರೆ.