ಕೊಪ್ಪಳ : ಕೊರೊನಾ ಸೋಂಕಿನ ಕುರಿತಂತೆ ಜನರಲ್ಲಿ ಜಾಗೃತಿ ಮೂಡಿಸುವ ಪ್ರಯತ್ನಗಳು ಜಿಲ್ಲೆಯಲ್ಲಿ ಮುಂದುವರೆದಿವೆ. ಉದ್ಯೋಗ ಖಾತ್ರಿ ಯೋಜನೆಯ ಕೆಲಸದಲ್ಲಿ ತೊಡಗಿರುವ ಕಾರ್ಮಿಕರಿಗೆ ಪ್ರತಿಜ್ಞಾವಿಧಿ ಬೋಧಿಸುವ ಮೂಲಕ ಕೊರೊನಾ ಕುರಿತಂತೆ ಜಾಗೃತಿ ಮೂಡಿಸಲಾಗುತ್ತಿದೆ.
ತಾಲೂಕಿನ ಅಳವಂಡಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಗ್ರಾಮಗಳಲ್ಲಿ ವೈಯಕ್ತಿಕ ಕೃಷಿ ಹೊಂಡ ನಿರ್ಮಾಣಕ್ಕೆ ಕಾರ್ಮಿಕರಿಗೆ ಕೆಲಸ ನೀಡಲಾಗಿದೆ. ಕೆಲಸದಲ್ಲಿ ತೊಡಗಿರುವ ಕಾರ್ಮಿಕರಿಗೆ ಕೊರೊನಾ ಕುರಿತಂತೆ ಜಾಗೃತಿ ಮೂಡಿಸುವ ಪ್ರತಿಜ್ಞಾವಿಧಿ ಬೋಧಿಸಲಾಗುತ್ತಿದೆ.
ಕೊರೊನಾ ಸೋಂಕು ಹರಡದಂತೆ ಕೈಗೊಳ್ಳಬೇಕಾದ ಮುಂಜಾಗೃತೆ ಕುರಿತ ಮಾಹಿತಿಯ ಸಾಲುಗಳನ್ನು ಈ ಪ್ರತಿಜ್ಞಾವಿಧಿಯಲ್ಲಿ ಹೇಳಿಸಲಾಗುತ್ತಿದೆ. ಒಂದಿಲ್ಲೊಂದು ರೀತಿಯಲ್ಲಿ ಕೋವಿಡ್ -19 ಕುರಿತಂತೆ ಜನರಲ್ಲಿ ಜಾಗೃತಿ ಮೂಡಿಸುವ ಪ್ರಯತ್ನ ಜಿಲ್ಲೆಯಲ್ಲಿ ನಿರಂತರವಾಗಿದೆ.