ಕೊಪ್ಪಳ: ಕೊರೊನಾ ವ್ಯಾಕ್ಸಿನ್ ಪಡೆಯಲು ಮೊದಲು ಜನರು ತುಸು ಹಿಂದೇಟು ಹಾಕಿದ್ದಾರೆ. ಆದರೆ, ಇತ್ತೀಚಿಗೆ ವಾಕ್ಸಿನ್ ಹಾಕಿಸಿಕೊಳ್ಳಲು ಬರುತ್ತಿದ್ದಾರೆ. ಈಗ ಕೊರೊನಾ ಎರಡನೇ ಅಲೆ ಶುರುವಾಗಿರುವುದರಿಂದ ಸರ್ಕಾರ ಈಗಾಗಲೇ ಸೂಚಿರುವ ವಯಸ್ಸಿನ ಜನರು ವ್ಯಾಕ್ಸಿನ್ ಹಾಕಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಾಳ್ಕರ್ ಮನವಿ ಮಾಡಿದ್ದಾರೆ.
ಆರಂಭದಲ್ಲಿ ಕೊರೊನಾ ವ್ಯಾಕ್ಸಿನ್ ಪಡೆಯಲು ಜನರು ಹಿಂದೇಟು ಹಾಕಿದ್ದರು. ಒಂದು ವಾರದಿಂದ ಜನರು ವ್ಯಾಕ್ಸಿನ್ ಹಾಕಿಸಿಕೊಳ್ಳಲು ಬರುತ್ತಿರೋದು ಸಂತೋಷದ ಸಂಗತಿ. ಸರ್ಕಾರ ಸೂಚಿಸಿರುವ 60 ವರ್ಷ ಮೇಲ್ಪಟ್ಟವರ ಮಾಹಿತಿ ಸಂಗ್ರಹಿಸಿದಂತೆ ಜಿಲ್ಲೆಯಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಜನರು ಇದ್ದಾರೆ. ಈಗಾಗಲೇ ನಮ್ಮ ಜಿಲ್ಲೆಯಲ್ಲಿ 60 ವರ್ಷ ಮೇಲ್ಪಟ್ಟ 29,383 ಜನರಿಗೆ ವ್ಯಾಕ್ಸಿನೇಷನ್ ಮಾಡಲಾಗಿದೆ. ಶೇಕಡಾ 28 ರಷ್ಟು ಪ್ರಗತಿ ಸಾಧಿಸಲಾಗಿದೆ. ಕೊರೊನಾ ಎರಡನೇ ಅಲೆ ಶುರುವಾಗಿದೆ. ಇದರಿಂದ ಜನರು ಜಾಗೃತರಾಗಿರಬೇಕು. ಕೋವಿಡ್ ನಿಯಮಗಳನ್ನು ಪಾಲಿಸುವುದರ ಜೊತೆಗೆ ಸೂಚಿತ ವಯಸ್ಸಿನವರು ಕೊರೊನಾ ವ್ಯಾಕ್ಸಿನ್ ಹಾಕಿಸಿಕೊಳ್ಳಬೇಕು. ಈಗ ಸ್ಥಳದಲ್ಲಿಯೇ ನೊಂದಣಿ ಮಾಡಿಸಿ ವ್ಯಾಕ್ಸಿನ್ ಪಡೆಯಬಹುದಾಗಿದೆ ಎಂದು ಡಿಸಿ ಜಿಲ್ಲೆಯ ಜನರಲ್ಲಿ ಮನವಿ ಮಾಡಿದ್ದಾರೆ.
ಓದಿ : ಚಿಕ್ಕಬಳ್ಳಾಪುರಕ್ಕೆ ಬಂದ 'ದಿ ಗ್ರೇಟ್ ಖಲಿ'... ನೆಚ್ಚಿನ ಕುಸ್ತಿಪಟು ನೋಡಲು ಅಭಿಮಾನಿಗಳ ನೂಕುನುಗ್ಗಲು!