ಕೊಪ್ಪಳ: ಜಿಲ್ಲೆಯಲ್ಲಿ ಶನಿವಾರ 365 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಮೂವರು ಸೋಂಕಿತರು ಸಾವನ್ನಪ್ಪಿದ್ದಾರೆ.
ಕೊಪ್ಪಳ ತಾಲೂಕಿನಲ್ಲಿ-122, ಗಂಗಾವತಿ-122, ಕುಷ್ಟಗಿ-58 ಹಾಗೂ ಯಲಬುರ್ಗಾ ತಾಲೂಕಿನ-63 ಪ್ರಕರಣ ಸೇರಿ 365 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. 3 ಜನ ಸೋಂಕಿತರು ಸಾವನ್ನಪ್ಪಿದ್ದು, ಈವರೆಗೆ ಒಟ್ಟು 464 ಜನರು ಸಾವನ್ನಪ್ಪಿದಂತಾಗಿದೆ.
ನಿನ್ನೆ 441 ಜನರು ಗುಣಮುಖರಾಗಿದ್ದು, ಈವರೆಗೆ ಒಟ್ಟು 22,953 ಜನರು ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ 4,798 ಸಕ್ರಿಯ ಪ್ರಕರಣಗಳಿದ್ದು, 3804 ಜನ ಸೋಂಕಿತರು ಹೋಂ ಐಸೋಲೇಷನ್ನಲ್ಲಿದ್ದಾರೆ. ಉಳಿದಂತೆ 994 ಜನ ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.