ಕೊಪ್ಪಳ: ಕೃಷಿ ಕಾಯ್ದೆ ತಿದ್ದುಪಡಿ ವಿರೋಧಿಸಿ ಹಾಗೂ ನೂತನ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯವಂತೆ ಆಗ್ರಹಿಸಿ ನಗರದ ರೈಲ್ವೆ ನಿಲ್ದಾಣದಲ್ಲಿ ರೈತ ಕಾರ್ಮಿಕ ಸಂಘಟನೆಗಳ ಸಮನ್ವಯ ಸಮಿತಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಕೇಂದ್ರ ಸರ್ಕಾರದ ಕೃಷಿ ತಿದ್ದುಪಡಿ ಕಾಯ್ದೆಗಳನ್ನು ವಾಪಸ್ ಪಡೆಯುವಂತೆ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಹೋರಾಟ ಬೆಂಬಲಿಸಿ ರಾಷ್ಟ್ರಾದ್ಯಂತ ಇಂದು ಕರೆ ನೀಡಲಾಗಿರುವ ಪ್ರತಿಭಟನೆಗೆ ಕೊಪ್ಪಳ ರೈತರು ಬೆಂಬಲ ನೀಡಿದ್ದಾರೆ.
ರೈತರು ಕೇಂದ್ರ ಸರ್ಕಾರದ ವಿರುದ್ದ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ರೈಲ್ವೆ ನಿಲ್ದಾಣಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.