ಕೊಪ್ಪಳ ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳಲ್ಲಿ ಖಾಲಿ ಇರುವ 21 ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲೆಯ ಒಟ್ಟು 21 ಗ್ರಾಮ ಪಂಚಾಯಿತಿಗಳಿಗೆ ಈ ಭರ್ತಿ ಪ್ರಕ್ರಿಯೆ ನಡೆಯಲಿದೆ. ಪಿಯುಸಿ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆ ವಿವರ: ಕೊಪ್ಪಳ ಜಿಲ್ಲಾ ವ್ಯಾಪ್ತಿಯ 21 ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದಲ್ಲಿ ಮೇಲ್ವಿಚಾರಕರ ಹುದ್ದೆ ಭರ್ತಿ
ವಿದ್ಯಾರ್ಹತೆ: ಅಭ್ಯರ್ಥಿಗಳು ಪಿಯುಸಿ ವಿದ್ಯಾರ್ಹತೆ ಮತ್ತು ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ಪ್ರಮಾಣಪತ್ರ ಪಡೆದಿರಬೇಕು. ಕನಿಷ್ಠ 3 ತಿಂಗಳ ಕಂಪ್ಯೂಟರ್ ಕೋರ್ಸ್ ಉತ್ತೀರ್ಣರಾಗಿರಬೇಕು.
ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ಪದವಿ ಪಡದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸದಿದ್ದಲ್ಲಿ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳನ್ನು ಹುದ್ದೆಗೆ ಪರಿಗಣಿಸಲಾಗುವುದು.
ವಿಶೇಷ ಸೂಚನೆ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಬಂಧಪಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಿವಾಸಿಯಾಗಿರಬೇಕು.
ವಯೋಮಿತಿ: ಅಭ್ಯರ್ಥಿಗಳು ಕನಿಷ್ಠ 18 ವರ್ಷ ಗರಿಷ್ಠ 35 ವರ್ಷ ವಯೋಮಿತಿ ಹೊಂದಿರಬೇಕು. ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪ.ಜಾತಿ, ಪ.ಪಂ ಮತ್ತು ಪ್ರವರ್ಗ 1 ಅಭ್ಯರ್ಥಿಗಳಿಗೆ 40 ವರ್ಷದವರೆಗೆ ವಯೋಮಿತಿ ಸಡಿಲಿಕೆ ನಡೆಸಲಾಗುವುದು.
ಆಯ್ಕೆ: ಮೆರಿಟ್ ಆಧಾರದ ಮೇಲೆ ದಾಖಲಾತಿ ಪರಿಶೀಲನೆ ನಡೆಸಿ ಅಭ್ಯರ್ಥಿಗಳ ಆಯ್ಕೆ ನಡೆಸಲಾಗುವುದು
ಅರ್ಜಿ ಸಲ್ಲಿಕೆ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕೊಪ್ಪಳ ಜಿಲ್ಲಾ ಪಂಚಾಯತ್, ಕೊಪ್ಪಳ ಗಂಗಾವತಿ, ಕುಷ್ಟಗಿ, ಯಲಬುರ್ಗಾ, ಕಾರಟಗಿ, ಕನಕಗಿರಿ, ಕುಕನೂರು ತಾಲೂಕು ಪಂಚಾಯಿತಿ ಹಾಗೂ ಹುದ್ದೆ ಖಾಲಿ ಇರುವ 21 ಗ್ರಾಮ ಪಂಚಾಯತಿಗಳಲ್ಲಿ ಅರ್ಜಿ ಪಡೆದು ಇಲ್ಲ, ವೆಬ್ಸೈಟ್ ಮೂಲಕ ಅರ್ಜಿ ಪಡೆದು ಈ ಕೆಳಗಿನ ವಿಳಾಸಕ್ಕೆ ನೇರವಾಗಿ ಅರ್ಜಿ ಸಲ್ಲಿಸಬೇಕು.
ಅರ್ಜಿ ಸಲ್ಲಿಕೆ ವಿಳಾಸ: ಆಯ್ಕೆ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ಹಾಗೂ ಉಪ ಕಾರ್ಯದರ್ಶಿಗಳು ಜಿಲ್ಲಾ ಪಂಚಾಯತ್, ಜಿಲ್ಲಾ ಆಡಳಿತ ಭವನ, ಹೊಸಪೇಟೆ ರೋಡ್ ಕೊಪ್ಪಳ, ಸೆಪ್ಟೆಂಬರ್ 9ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಶುರುವಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನ ಸೆಪ್ಟೆಂಬರ್ 25 ಆಗಿದೆ.
ಅಭ್ಯರ್ಥಿಗಳು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆ koppal.nic.in ಈ ಜಾಲತಾಣಕ್ಕೆ ಭೇಟಿ ನೀಡಬಹುದು. ಹುದ್ದೆ, ಅರ್ಜಿ ಸಲ್ಲಿಕೆ ಕುರಿತ ಸ್ಪಷ್ಟೀಕರಣಕ್ಕೆ 9480871001 ಈ ಸಹಾಯವಾಣಿಗೆ ಸಂಪರ್ಕಿಸಬಹುದು.
ಇದನ್ನೂ ಓದಿ: ಐಡಿಬಿಐನ 600 ಜ್ಯೂನಿಯರ್ ಅಸಿಸ್ಟಂಟ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ