ETV Bharat / state

ಕರ್ನಾಟಕ ಗ್ರಾಮೀಣ ಬ್ಯಾಂಕ್ ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ - Koppal Karnataka Rural Bank Theft case

ಪ್ರಕರಣ ಭೇದಿಸುವುದು ಅಷ್ಟೊಂದು ಸುಲಭವಾಗಿರಲಿಲ್ಲ. ಆದರೂ ಘಟನೆ ನಡೆದ 13 ದಿನಗಳಲ್ಲಿ ವೈಜ್ಞಾನಿಕ ರೀತಿಯಲ್ಲಿ ತನಿಖೆ ಮಾಡಿ ಆರೋಪಿಗಳನ್ನು ಪತ್ತೆ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ. ಸಂಗೀತಾ ತಿಳಿಸಿದ್ದಾರೆ.

District Superintendent of Police G sangeetha
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ. ಸಂಗೀತಾ
author img

By

Published : Oct 8, 2020, 5:43 PM IST

ಕೊಪ್ಪಳ: ಕಳೆದ ಸೆ. 23 ರಂದು ರಾತ್ರಿ ಜಿಲ್ಲೆಯ ಯಲಬುರ್ಗಾ ತಾಲೂಕಿನ ಬೇವೂರು ಗ್ರಾಮದ ಕರ್ನಾಟಕ ಗ್ರಾಮೀಣ ಬ್ಯಾಂಕ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಪ್ರಕರಣದ ಪ್ರಮುಖ ಆರೋಪಿ ಸೇರಿ ಉಳಿದ ಆರೋಪಿಗಳ ಬಂಧನಕ್ಕೆ ಬಲೆ ಬೀಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ. ಸಂಗೀತಾ ಹೇಳಿದ್ದಾರೆ.

ಇಂದು ಮಾಧ್ಯಮಗೋಷ್ಟಿಯಲ್ಲಿ ತನಿಖೆಯ ಮಾಹಿತಿ ನೀಡಿದ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಮಹಾರಾಷ್ಟ್ರದ ಪ್ರಶಾಂತ ಮೋರೆ ಹಾಗೂ ಹರಿದಾಸ ಎಂಬಿಬ್ಬರನ್ನು ಬಂಧಿಸಲಾಗಿದೆ. ಪ್ರಕರಣದ ಪ್ರಮುಖ ಆರೋಪಿ ಸಂತೋಷ್ ಎಂಬಾತ ಸೇರಿದಂತೆ ಉತ್ತರಪ್ರದೇಶ 6 ಜನ ಹಾಗೂ ಮಹಾರಾಷ್ಟ್ರದ ಮೂರು ಜನ ಸೇರಿ ಇನ್ನೂ 10 ಜನ ಆರೋಪಿಗಳ ಬಂಧನಕ್ಕೆ ಬಲೆ ಬೀಸಲಾಗಿದೆ‌ ಎಂದು ತಿಳಿಸಿದರು.

ಈಗ ಬಂಧಿತರಾಗಿರುವ ಈ ಇಬ್ಬರು ಆರೋಪಿಗಳಿಂದ 370 ಗ್ರಾಂ ಬಂಗಾರದ ಆಭರಣಗಳು ಹಾಗೂ 65 ಸಾವಿರ ರೂಪಾಯಿ ನಗದು ಹಾಗೂ ಕೃತ್ಯಕ್ಕೆ ಬಳಸಿದ ಒಂದು ಸ್ಕಾರ್ಪಿಯೋ ಕಾರ್, ಒಂದು ಸ್ವಿಫ್ಟ್ ಕಾರು ಮತ್ತು ಮೊಬೈಲ್ ವಶಪಡಿಸಿಕೊಳ್ಳಲಾಗಿದೆ. ಉಳಿದ ಆರೋಪಿಗಳನ್ನು ಬಂಧಿಸಲು ಬಲೆ ಬೀಸಲಾಗಿದೆ ಎಂದು ವಿವರಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ. ಸಂಗೀತಾ ಅವರಿಂದ ತನಿಖೆ ಕುರಿತು ಮಾಹಿತಿ

ಕ್ಲಿಷ್ಟಕರವಾಗಿತ್ತು: ಬೇವೂರು ಬ್ಯಾಂಕ್ ಕಳ್ಳತನ ಪ್ರಕರಣ ಭೇದಿಸುವುದು ಅಷ್ಟು ಸುಲಭವಾಗಿರಲಿಲ್ಲ. 12 ಜನರ ಈ ದರೋಡೆಕೋರರ ತಂಡ ಬೇವೂರು ಬ್ಯಾಂಕ್ ಗೆ ನುಗ್ಗಿ ಗ್ಯಾಸ್ ಕಟರ್ ನಿಂದ ಲಾಕರ್ ಮುರಿದು 3 ಕೆಜಿ 761 ಗ್ರಾಂ ಬಂಗಾರದ ಆಭರಣಗಳು ಹಾಗೂ 21,75,572 ರೂಪಾಯಿ ನಗದು ದೋಚಿಕೊಂಡು ಪರಾರಿಯಾಗಿದ್ದರು.

ಪ್ರಕರಣ ಪತ್ತೆಗೆ ನಾಲ್ಕು ವಿಶೇಷ ತಂಡ ರಚಿಸಲಾಗಿತ್ತು. ಆರೋಪಿಗಳು ಯಾವುದೇ ಸುಳಿವು ಸಹ ಬಿಟ್ಟು ಹೋಗಿರಲಿಲ್ಲ. ಪ್ರಕರಣ ಭೇದಿಸುವುದು ಅಷ್ಟೊಂದು ಸುಲಭವಾಗಿರಲಿಲ್ಲ. ಆದರೂ ಘಟನೆ ನಡೆದ 13 ದಿನಗಳಲ್ಲಿ ವೈಜ್ಞಾನಿಕ ರೀತಿಯಲ್ಲಿ ತನಿಖೆ ಮಾಡಿ ಆರೋಪಿಗಳನ್ನು ಪತ್ತೆ ಹಚ್ಚಲಾಗಿದೆ. ಈಗ ಬಂಧಿತವಾಗಿರುವ ಆರೋಪಿಗಳನ್ನು ಝಳಕಿ ಚೆಕ್ ಪೋಸ್ಟ್ ಬಳಿ ಪತ್ತೆ ಮಾಡಿ ಬಂಧಿಸಿ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ದರೋಡೆ ಮಾಡಿರುವ ಎಲ್ಲ ಹಣವನ್ನು ಮತ್ತು ಬಂಗಾರವನ್ನು ಎಲ್ಲರೂ ಹಂಚಿಕೊಂಡಿದ್ದಾರೆ. ಈಗ ಇಬ್ಬರು ಆರೋಪಿಗಳಿಂದ ಸತ್ಯ ಬಾಯ್ಬಿಡಿಸಿ ಉಳಿದ ಆರೋಪಿಗಳ ಬಂಧನಕ್ಕೆ ಬಲೆ ಬೀಸಲಾಗಿದೆ. ಆದಷ್ಟು ಬೇಗ ಉಳಿದ ಆರೋಪಿಗಳನ್ನು ಬಂಧಿಸಲಾಗುವುದು ಎಂದು ತಿಳಿಸಿದ ಎಸ್​ಪಿ, ಕ್ಲಿಷ್ಟಕರ ಪ್ರಕರಣ ಭೇದಿಸಿದ ವಿಶೇಷ ತಂಡಗಳ ಅಧಿಕಾರಿ, ಸಿಬ್ಬಂದಿಯನ್ನು ಇದೇ ಸಂದರ್ಭದಲ್ಲಿ ಅಭಿನಂದಿಸಿದರು.

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.